ಮುಂಬೈ : ಭೋಜ್ ಪುರಿ ಸಿನಿರಂಗಕ್ಕೆ ಬರಸಿಡಿಲು ಬಡಿದಿದೆ.ಪ್ರಸಿದ್ಧ ಭೋಜ್ಪುರಿ ನಟ ಮತ್ತು ನಿರ್ಮಾಪಕ ಸುದೀಪ್ ಪಾಂಡೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮುಂಬೈನಲ್ಲಿ ಚಿತ್ರೀಕರಣದ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರ ಆಕಸ್ಮಿಕ ನಿಧನ ಭೋಜ್ಪುರಿ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.
ನಟನೆ, ನಿರ್ಮಾಣದ ಜೊತೆ ರಾಜಕೀಯದಲ್ಲೂ ಸಕ್ರಿಯರಾಗಿದ್ದರು. ಇತ್ತೀಚೆಗೆ ಸಿನಿಮಾ ನಿರ್ಮಾಣದಲ್ಲಿ ಸಾಕಷ್ಟು ನಷ್ಟ ಅನುಭವಿಸಿದ್ದರು.
ಸುದೀಪ್ ಪಾಂಡೆ ನಿಧನ ವಾರ್ತೆ ಅವರ ಅಭಿಮಾನಿಗಳಿಗೆ ಹಾಗೂ ಭೋಜ್ಪುರಿ ಇಂಡಸ್ಟ್ರಿಗೆ ಬರಸಿಡಿಲು ಬಡಿದಂತೆ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಆತ್ಮಕ್ಕೆ ಶಾಂತಿ ಕೋರಲಾಗುತ್ತಿದೆ.
ಜನವರಿ 5ರಂದು ಸುದೀಪ್ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಅವರಿಗೆ ಅಭಿಮಾನಿಗಳು ಶುಭಾಶಯ ಕೋರಿದ್ದರು.
ಜನ್ಮದಿನಾಚರಣೆ ಮುಗಿಸಿದ ಬಳಿಕ ಅವರು ಶೂಟಿಂಗ್ನಲ್ಲಿ ತೊಡಗಿಕೊಂಡಿದ್ದರು. ಅವರು ತಮ್ಮ ಮುಂದಿನ ಚಿತ್ರದ ಶೂಟ್ಗಾಗಿ ಮುಂಬೈಗೆ ಬಂದಿದ್ದರು. ಅವರು ನಟಿಸುವಾಗಲೇ ಹೃದಯಾಘಾತ ಆಗಿದೆ ಎನ್ನಲಾಗಿದೆ.