ಧಮತರಿ (ಛತ್ತೀಸ್ಗಢ): ಆರು ವರ್ಷದ ತನ್ನ ಸ್ವಂತ ಮಗನನ್ನು ಕೊಲೆ ಮಾಡಿದ ತಂದೆಯೊಬ್ಬ, ಬಳಿಕ ತಾನೂ ಸಹ ಆತ್ಮಹತ್ಯೆ ಮಾಡಿಕೊಂಡ ಘಟನೆ ಅರ್ಜುನಿ ಪೊಲೀಸ್ ಠಾಣಾ ವ್ಯಾಪ್ತಿಯ ಬೋದ್ರಾ ಎಂಬ ಗ್ರಾಮದಲ್ಲಿ ಭಾನುವಾರ ನಡೆದಿದೆ.
ರಾಮನವಮಿಯ ದಿನದಂದೇ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ತರಿಸಿದೆ. ಗೋಪೇಶ್ವರ ಸಾಹು ಮಗನನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ತಂದೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅರ್ಜುನಿ ಪೊಲೀಸರು ಪರಿಶೀಲನೆ ನಡೆಸಿದರು.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ: ಮಗನ ಹತ್ಯೆ ಬಳಿಕ ಆರೋಪಿ ತಂದೆ ಗೋಪೇಶ್ವರ ಸಾಹು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೋರೆನ್ಸಿಕ್ ತಂಡ ಸ್ಥಳಕ್ಕೆ ಆಗಮಿಸಿ ಘಟನೆಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ತಕ್ಷಣಕ್ಕೆ ದುರ್ಘಟನೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದು, ತನಿಖೆ ಬಳಿಕ ನಿಖರ ಕಾರಣ ತಿಳಿದು ಬರಲಿದೆ ಎಂದು ಅರ್ಜುನಿ ಪೊಲೀಸರು ಮಾಹಿತಿ ನೀಡಿದ್ದಾರೆ.