Ad imageAd image

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ

Bharath Vaibhav
ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ
WhatsApp Group Join Now
Telegram Group Join Now

ಬೈಲಹೊಂಗಲ: -ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸನ್ 2024-25 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ನಡೆಯಿತು. ಅತ್ಯಂತ ಖುಷಿಯಿಂದ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕರು ಆತ್ಮೀಯವಾಗಿ ಸ್ವಾಗತಿಸಿದರು. ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಹೊಸ ಶೈಕ್ಷಣಿಕ ವರ್ಷವನ್ನು ಬರಮಾಡಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಅಧ್ಯಯನದ ವೇಳಾಪಟ್ಟಿ ವಿತರಿಸಲಾಯಿತು. ಅಕ್ಷರ ಬಂಡಿಯ ಜೊತೆ ಕುಂಭಗಳನ್ನು ಹಿಡಿದುಕೊಂಡು ಡೊಳ್ಳು ಮೇಳದೊಂದಿಗೆ ಗ್ರಾಮದಲ್ಲಿ ನಡೆದ ಪ್ರಭಾತಪೇರಿ ಎಲ್ಲರ ಗಮನ ಸೆಳೆಯಿತು. ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎನ್. ಕಸಾಳೆ ಭೇಟಿ ನೀಡಿ ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಸಿಆರ್‌ಪಿ ಗೌಡಪ್ಪ ಪಾಟೀಲ, ಆರ್.ಸಿ. ತುರಮರಿ, ಬಾಹುಬಲಿ ಠಕಾಯಿ ಇದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ ಮಾತನಾಡಿ 2024-25ನೇ ವರ್ಷವನ್ನು ಶೈಕ್ಷಣಿಕ ಬಲವರ್ಧನೆ ವರ್ಷವೆಂದು ಆಚರಿಸಲಾಗುತ್ತಿದ್ದು ವಿದ್ಯಾರ್ಥಿಗಳು ತಮ್ಮಲ್ಲಿನ ಜ್ಞಾನ, ತಿಳಿವಳಿಕೆಯನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಹೊಸದನ್ನು ಕಲಿಯುವ ಕುತೂಹಲ ಬೆಳೆಸಿಕೊಂಡರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ದುಂಡಯ್ಯ ನರೇಂದ್ರಮಠ ಮಾತನಾಡಿ ಮಕ್ಕಳು ಗುರುಗಳಿಗೆ ವಿಧೇಯರಾಗಿದ್ದಾಗ ಮಾತ್ರ ವಿದ್ಯೆ ಕಲಿಯಬಲ್ಲರು ಎಂದರು. ಇದೇ ಸಂದರ್ಭದಲ್ಲಿ ವಯೋನಿವೃತ್ತಿಯಾದ ಗ್ರಾಮದ ಪ್ರಾಥಮಿಕ ಶಾಲೆಯ ಪ್ರಭಾರಿ ಪ್ರಧಾನ ಗುರುಗಳಾದ ಎಂ.ಬಿ. ಹೊಂಗಲ ಅವರಿಗೆ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಸರಕಾರದಿಂದ ಸಾಕಷ್ಟು ಸವಲತ್ತುಗಳು ಲಭ್ಯವಿದ್ದು ಮಕ್ಕಳು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಕಳೆದ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸ್ಥಾನ ಪಡೆದ ಅಕ್ಷಯ ನರೇಂದ್ರಮಠ, ಅಮೃತ ನರೇಂದ್ರಮಠ, ಮಹೇಶ ಬಾರ್ಕಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಅಭಿಷೇಕ ನರೇಂದ್ರಮಠ ಇವರನ್ನು ಗ್ರಾಮದ ಮಾಜಿ ಹಾಗೂ ಹಾಲಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸನ್ಮಾನಿಸಲಾಯತು. ಸಂಘದ ಅಧ್ಯಕ್ಷ ವೆಂಕಣ್ಣ ಬಡಿಗೇರ ಮಾತನಾಡಿ ಬದುಕಿನಲ್ಲಿ ಶಿಸ್ತು ಮತ್ತು ಸಂಯಮ ಇದ್ದಾಗ ಮಾತ್ರ ಸಾಧನೆ ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ವಿನಾಯಕ ಬಡಿಗೇರ, ಮಾಜಿ ಸೈನಿಕರಾದ ದುಂಡಪ್ಪ ಮಡಿವಾಳರ, ಸಿದ್ದಪ್ಪ ಮನಗುತ್ತಿ, ಸೋಮನಿಂಗ ಕಡಬಿ, ರವೀಂದ್ರ ಮನಗುತ್ತಿ, ಉಮೇಶ ಕಾರಿಮನಿ, ಬಸಯ್ಯ ನರೇಂದ್ರಮಠ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಶಿವಾನಂದ ಬಳಿಗಾರ, ರೇಖಾ ಸೊರಟೂರ, ಹೇಮಲತಾ ಪುರಾಣಿಕ ಹಾಗೂ ಅಡುಗೆ ಸಹಾಯಕರಾದ ಮಹಾದೇವಿ ಸೊಗಲದ, ಗಂಗವ್ವ ಅಳಗೋಡಿ ಹಾಗೂ ಗ್ರಾಮಸ್ಥರಾದ ಶಿವಾನಂದ ಚಚಡಿ, ಬಾಬು ಕುಲಕರ್ಣಿ, ಗಂಗಪ್ಪ ಆಡಿನ, ಶರಾವತಿ ಗಡಾದ ಉಪಸ್ಥಿತರಿದ್ದರು. ಲಕ್ಷ್ಮೀ ನಾಗಣ್ಣವರ ಸ್ವಾಗತಿಸಿದರು. ಚೇತನಾ ಗಡಾದ ವಂದಿಸಿದರು. ಪೃಥ್ವಿ ಗರಗದ ನಿರೂಪಿಸಿದರು.

 

ವರದಿ ದುಂಡಪ್ಪ ಹೂಲಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!