Ad imageAd image

ಇನ್ಮುಂದೆ ಸಾಮಾಜಿಕ ಬಹಿಷ್ಕಾರ ಹಾಕಿದರೆ, 1 ಲಕ್ಷ ರೂ. ದಂಡ, 3 ವರ್ಷ ಜೈಲು ಶಿಕ್ಷೆ : ಮಸೂದೆ ಮಂಡನೆ

Bharath Vaibhav
ಇನ್ಮುಂದೆ ಸಾಮಾಜಿಕ ಬಹಿಷ್ಕಾರ ಹಾಕಿದರೆ, 1 ಲಕ್ಷ ರೂ. ದಂಡ, 3 ವರ್ಷ ಜೈಲು ಶಿಕ್ಷೆ : ಮಸೂದೆ ಮಂಡನೆ
WhatsApp Group Join Now
Telegram Group Join Now

ಬೆಳಗಾವಿ : ವಿಧಾನಸಭೆಯಲ್ಲಿ ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ ತಡೆ, ನಿಷೇಧ ಮತ್ತು ಪರಿಹಾರ ಮಸೂದೆ-2025 ಮಂಡಿಸಲಾಗಿದ್ದು, ಈ ಮಸೂದೆ ಅನ್ವಯ ಇನ್ಮುಂದೆ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ, 1 ಲಕ್ಷ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

ಈ ಮಸೂದೆಯಂತೆ ಇನ್ನು ಮುಂದೆ ಸಾಮಾಜಿಕ ಬಹಿಷ್ಕರಿಸುವ ತೀರ್ಮಾನ ತೆಗೆದುಕೊಂಡವರು, ಬಹಿಷ್ಕಾರ ಮಾಡಲು ನಡೆಸುವ ಸಭೆ ಹಾಗೂ ಪಂಚಾಯ್ತಿ ನಡೆಸಿದವರನ್ನು ಅಪರಾಧಿಗಳು ಎಂದು ಪರಿಗಣಿಸಲಾಗುವುದು.‌

ಬಹಿಷ್ಕಾರಕ್ಕೆ ಒತ್ತಡ ಹೇರಿ ಪರೋಕ್ಷವಾಗಿ ಕಾರಣರಾದವರು, ಬಹಿಷ್ಕಾರದ ಪರವಾಗಿ ಮತ ಹಾಕಿದವರು ಅಥವಾ ಚರ್ಚೆಯಲ್ಲಿ ಪಾಲ್ಗೊಂಡವರನ್ನೂ ಅಪರಾಧಿಗಳೆಂದು ನಿರ್ಧರಿಸಲಾಗುತ್ತದೆ.

ಬಹಿಷ್ಕಾರಕ್ಕೆ ಒತ್ತಡ ಹೇರುವ ಮೂಲಕ ನಿರ್ಧಾರಕ್ಕೆ ಕಾರಣರಾದವರು, ಬಹಿಷ್ಕಾರದ ಪರವಾಗಿ ಮತ ಹಾಕಿದವರು ಅಥವಾ ಚರ್ಚೆಯಲ್ಲಿ ಪಾಲ್ಗೊಂಡವರನ್ನೂ ಅಪರಾಧಿಗಳೆಂದು ನಿರ್ಧರಿಸಲಾಗುತ್ತದೆ.

ಈ ಕುರಿತು ಸಭೆ, ಜಮಾವಣೆ, ಸಮಾವೇಶ ನಡೆಸುವುದು ಅಕ್ರಮ ಎಂದು ಮಸೂದೆಯಲ್ಲಿ ಉಲ್ಲೇಖಿಸಿದೆ. ಬಹಿಷ್ಕಾರಕ್ಕೆ ಒಳಗಾಗುವವರು ಠಾಣೆ ಅಥವಾ ನ್ಯಾಯಾಧೀಶರಿಗೆ ನೇರವಾಗಿ ದೂರು ಸಲ್ಲಿಸಬಹುದು.

ಯಾವುದೆಲ್ಲ ನಿಷೇಧ?

1) ಗ್ರಾಮ ಅಥವಾ ಸಮುದಾಯದಿಂದ ಹೊರಹಾಕುವುದು

2) ಧಾರ್ಮಿಕ, ಸಾರ್ವಜನಿಕ ಸ್ಥಳಗಳ ಬಳಕೆಗೆ ನಿರ್ಬಂಧ ವಿಧಿಸುವುದು

3) ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿ ಮಾಡುವುದು, ವ್ಯವಹಾರ ಅಥವಾ ಉದ್ಯೋಗ ತಿರಸ್ಕಾರ ಮಾಡುವುದು

4) ಶಾಲೆ, ಆಸ್ಪತ್ರೆ, ಸಮುದಾಯ ಭವನಗಳ ಪ್ರವೇಶಕ್ಕೆ ತಡೆಯೊಡ್ಡುವುದು, ಸೇವೆಗಳು, ಅವಕಾಶಗಳನ್ನು ನಿರಾಕರಿಸುವುದು

5) ಸಾಮಾಜಿಕ-ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ತಡೆಯೊಡ್ಡುವುದು, ಮದುವೆ, ಅಂತ್ಯಕ್ರಿಯೆಗಳಲ್ಲಿ ಭಾಗವಹಿಸುವುದಕ್ಕೆ ತಡೆಯೊಡ್ಡುವುದು

6) ವ್ಯಾಪಾರ, ಸಾಮಾಜಿಕ ಸಂಬಂಧಗಳಿಗೆ ತಡೆಯೊಡ್ಡುವುದು, ಮಕ್ಕಳನ್ನು ಒಟ್ಟಿಗೆ ಆಡಲು ಅಡ್ಡಿಪಡಿಸುವುದು, ಲಿಂಗತ್ವದ ಆಧಾರದ ಮೇಲೆ ಭೇದ ಮಾಡುವುದು

7) ಮಾನವ ಹಕ್ಕುಗಳನ್ನು ನಿರಾಕರಿಸುವುದು ಹಾಗೂ ಬಟ್ಟೆ, ಭಾಷೆ, ಸಾಂಸ್ಕೃತಿಕ ಭೇದ ಎಸಗುವುದನ್ನು ಈ ಪ್ರಸ್ತಾಪಿತ ಮಸೂದೆಯಡಿ ನಿಷೇಧಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!