ಕಾನ್ಪುರ ದೇಹತ್: ಏಳು ವರ್ಷದ ಬಾಲಕನೊಬ್ಬ ತನ್ನ ನೆರೆಹೊರೆಯ ಐದು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಯುಪಿಯ ಕಾನ್ಪುರ ದೇಹತ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಅಕ್ಬರ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಮಂಗಳವಾರ ಹುಡುಗಿಯ ತಾಯಿ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 5/6 ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಮಕ್ಕಳಿಬ್ಬರನ್ನೂ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದ್ದು, ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಘಟನೆ ನಡೆದಾಗ ತನ್ನ ಮಗಳು ಆಟವಾಡಲು ಹೊರಗೆ ಹೋಗಿದ್ದಳು ಎಂದು ಐದು ವರ್ಷದ ಬಾಲಕಿಯ ತಾಯಿ ಹೇಳಿದ್ದಾರೆ.
ಪೊಲೀಸರು ಈ ಪ್ರಕರಣವನ್ನು ಎಚ್ಚರಿಕೆಯಿಂದ ನಡೆಸುತ್ತಿದ್ದಾರೆ. ಏಳು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗು ಅಪರಾಧ ಮಾಡಿದರೆ, ಅದು ಅಪರಾಧದ ವರ್ಗಕ್ಕೆ ಬರುವುದಿಲ್ಲ. ಆದರೂ, ಕಾನೂನು ಅಭಿಪ್ರಾಯ ಪಡೆದ ನಂತರವೇ ಈ ಪ್ರಕರಣದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.