ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಮಹತ್ವದ ಸಭೆಯಲ್ಲಿ ಭಾಗವಹಿಸಿದ್ದರು.
ಜಿಲ್ಲೆಯ ಶಾಸಕರು ಹಾಗೂ ಸಚಿವರೊಂದಿಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಶಾಸಕರಿಗೆ ನೀಡಲಾಗಿರುವ ವಿವಿಧ ಅನುದಾನದ ಬಳಕೆಯ ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು ಸಮಗ್ರ ಚರ್ಚೆ ನಡೆಸಿದರು.

ವೈದ್ಯಕೀಯ, ಶಿಕ್ಷಣ, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ವೇಗವಾಗಿ ಅಭಿವೃದ್ಧಿಪಡಿಸುವುದು, ಬಾಕಿ ಉಳಿದ ಕಾಮಗಾರಿಗಳನ್ನು ಗಡುವಿನೊಳಗೆ ಪೂರ್ಣಗೊಳಿಸುವುದು ಹಾಗೂ ಗ್ಯಾರಂಟಿ ಯೋಜನೆಗಳ ಲಾಭವನ್ನು ಪ್ರತಿ ಅರ್ಹ ಫಲಾನುಭವಿಗೆ ತಲುಪಿಸುವ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟ ಮಾರ್ಗದರ್ಶನ ನೀಡಿದರು.

ಈ ವೇಳೆ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಲಕ್ಷ್ಮಣ ಸವದಿ, ರಾಜು ಕಾಗೆ, ಮಹಾಂತೇಶ ಕೌಜಲಗಿ, ಬಾಬಾಸಾಹೇಬ್ ಪಾಟೀಲ, ಆಸಿಫ್ ಸೇಠ್, ವಿಶ್ವಾಸ್ ವೈದ್ಯ, ಗಣೇಶ ಹುಕ್ಕೇರಿ, ಮಹೇಶ್ ತಮ್ಮಣ್ಣವರ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ನಾಸಿರ್ ಅಹ್ಮದ್ ಉಪಸ್ಥಿತರಿದ್ದರು.




