ಬೆಳಗಾವಿ: ಕನ್ನಡ ಮಾತಾಡು ಅಂದಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಕೆ.ಎಚ್. ಗ್ರಾಮದಲ್ಲಿ ನಡೆದಿದೆ.
ಬಸ್ ನಲ್ಲಿದ್ದ ಯುವತಿ ಮರಾಠಿಯಲ್ಲಿ ಶಕ್ತಿ ಯೋಜನೆಯ ಉಚಿತ ಟಿಕೆಟ್ ಕೇಳಿದ್ದಾಳೆ.ಯುವತಿಯೊಂದಿಗೆ ಯುವಕನೊಬ್ಬ ಪ್ರಯಾಣ ಮಾಡುತ್ತಿದ್ದರಿಂದ ಯುವತಿ ಎರಡು ಟಿಕೆಟ್ ಕೇಳಿದ್ದಾಳೆ.
ಈ ವೇಳೆ ಕಂಡಕ್ಟರ್ ಮಹಾದೇವ ಮರಾಠಿ ಬರುವುದಿಲ್ಲ, ಕನ್ನಡದಲ್ಲಿ ಮಾತಾಡುವಂತೆ ಹೇಳಿದ್ದಾನೆ. ಕಂಡಕ್ಟರ್ ಮರಾಠಿ ಬರಲ್ಲ ಎನ್ನುತ್ತಿದ್ದಂತೆ ಚಲಿಸುತ್ತಿದ್ದ ಬಸ್ ನಿಲ್ಲಿಸಿ, ಯುವಕರನ್ನು ಕರೆಸಿ ಕಂಡಕ್ಟರ್ ಮೇಲೆ ಹಲ್ಲೆ ಮಾಡಲಾಗಿದೆ. ಸದ್ಯ ಹಲ್ಲೆಗೊಳಗಾದ ಬಸ್ ಕಂಡಕ್ಟರ್ ಮಾಳಮಾರುತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದೀಗ ಈ ಘಟನೆ ಖಂಡಿಸಿ ಕನ್ನಡಪರ ಸಂಘಟನೆಗಳು ಖಂಡಿಸಿವೆ. ಹಲ್ಲೆ ನಡೆಸಿದ ಪುಂಡರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಕನ್ನಡಿಗರು ಒತ್ತಾಯಿಸಿದ್ದಾರೆ