ಬೀದರ:-ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದಿನಾಂಕ 02-09-2024 ಸೋಮವಾರ ಬೀದರ ಜಿಲ್ಲೆಯ ಎಲ್ಲಾ ಸರ್ಕಾರಿ/ ಅನುದಾನಿತ/ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಮಕ್ಕಳಿಗೆ ಶಾಲೆಗೆ ಹಾಜರಾಗಲು ಅನಾನೂಕುಲವಾಗುವ ದೃಷ್ಟಿಯಿಂದ ಉಲ್ಲೇಖಿತ ಆದೇಶದನ್ವಯ ಮುಂಜಾಗೃತ ಕ್ರಮವಾಗಿ ನಾಳೆ ದಿನಾಂಕ 02-09-2024 ರಂದು ಸೋಮವಾರ ಬೀದರ ಜಿಲ್ಲೆಯ ಎಲ್ಲಾ ಸರ್ಕಾರಿ/ ಅನುದಾನಿತ/ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.
ವರದಿ :-ಸಜೀಶ್