ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ ಘಟನೆ. ಬಿರುಗಾಳಿಗೆ ಒಂದಕ್ಕೊಂದು ಹೈ ವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪುರುಷೋತ್ತಮ ದೇಶಪಾಂಡೆ ಎಂಬುವರ ಮನೆಯಲ್ಲಿ ಹೊತ್ತಿಕೊಂಡ ಬೆಂಕಿ. ಮನೆಯಲ್ಲಿ ಯಾರು ಇಲ್ಲದ ವೇಳೆ ನಡೆದ ಘಟನೆ.
ಸವದಿ ಗ್ರಾಮದ ಬಹುತೇಕ ಮನೆಗಳಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಎಲೆಕ್ಟ್ರಿಕ್ ವಸ್ತುಗಳಿಗೆ ಹಾನಿ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಅಗ್ನಿ ನಂದಿಸುವ ಕಾರ್ಯ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
ವರದಿ : ಅಜಯ್ ಕಾಂಬಳೆ