ಯರಗಟ್ಟಿ: ಈ ಕಾರ್ಯಕ್ರಮವು ಕನ್ನಡ ರಾಜ್ಯೋತ್ಸವದ ಮಹತ್ವವನ್ನು ಸಾರುವಂತೆ ಧ್ವಜಾರೋಹಣ, ಪಥಸಂಚಲನ, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ತಬ್ಧ ಚಿತ್ರಗಳ ಪ್ರದರ್ಶನ ಮತ್ತು ಸ್ಥಳೀಯ ಗಣ್ಯರ ಭಾಷಣಗಳನ್ನು ಒಳಗೊಂಡಿದ್ದವು.

ಇದು ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮ ಉದ್ದೇಶಿಸಿ ಉಪನ್ಯಾಸ ನೀಡಿದ ವಸತಿ ನಿಲಯ ಪಾಲಕರಾದ ಆಶಾ ಪರೀಟ ಅವರು ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.
ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ.
ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯಾದ್ಯ೦ತ ಮಹದಾನ೦ದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ.
ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ನಾಡಗೀತೆ (“ಜಯ ಭಾರತ ಜನನಿಯ ತನುಜಾತೆ”)ಯನ್ನು ಹಾಡಲಾಗುತ್ತದೆ. ಸರ್ಕಾರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ.
ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ ಹಾಗೂ ಸರ್ಕಾರ ಮೆರವಣಿಗೆ ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟ ದೊಂದಿಗೆ ಅಲಂಕರಿಸಲಾಗಿರುತ್ತವೆ. ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಕಟ ಪಡಿಸಲಾಗುತ್ತದೆ ಎಂದು ಹೇಳಿದರು.
ಈ ವೇಳೆ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪ. ಪಂ. ಸದಸ್ಯರಾದ ಹಣಮಂತ ಹಾರುಗೊಪ್ಪ , ಸಲೀಂಬೇಗ ಜಮಾದಾರ, ಮುರಗೋಡ ಸಿಪಿಐ ಐ ಎಂ ಮಠಪತಿ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶಿದಬಸನ್ನವರ, ಹೇಸ್ಕಾಂ ಅಧಿಕಾರಿ ಮಹಾಂತೇಶ ಯರಗಟ್ಟಿ, ಬೆಮೂಲ್ ನಿರ್ದೇಶಕ ಶಂಕರ ಇಟ್ನಾಳ, ಪ್ರಕಾಶ ವಾಲಿ, ಕಸಾಪ ಅಧ್ಯಕ್ಷ ತಮ್ಮಣ್ಣ ಕಾಮಣ್ಣವರ, ಎಸ್ ಎಂ ಹರಳಿಕಟ್ಟಿ, ಎ. ಎ. ಮುಕ್ತುಮ್ಮನವರ, ಕುಮಾರ ಹಿರೇಮಠ, ಕೃಷಿ ಅಧಿಕಾರಿ ಎಂ ಜಿ ಕಳಸಪ್ಪನವರ, ವಿಠ್ಠಲಗೌಡ ದೇವರಡ್ಡಿ, ಕರವೇ ಅಧ್ಯಕ್ಷ ರಫೀಕ ಡಿಕೆ, ಶಿವಾನಂದ ಕರಿಗೊನ್ನವರ, ಸುರೇಶ ಭಜಂತ್ರಿ, ವಸಂತ ಬಡಿಗೇರ, ಎಂ. ಎಂ. ಚಿಲದ, ಶಿವಾನಂದ ಮಿಕಲಿ, ದೇವೇಂದ್ರ ಕಮ್ಮಾರ, ಬಾ. ವಿಶ್ವನಾಥ ತಾವಂಶಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಈರಣ್ಣಾ ಹೂಲ್ಲೂರ




