Ad imageAd image
- Advertisement -  - Advertisement -  - Advertisement - 

ಎಸ್.ಟಿ. ಸಮುದಾಯಕ್ಕೆ ಮೀಸಲಾಗಿದ್ದ ಅನುದಾನ,ನುಂಗಿ ದಲಿತರಿಗೆ ದ್ರೋಹ,ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Bharath Vaibhav
ಎಸ್.ಟಿ. ಸಮುದಾಯಕ್ಕೆ ಮೀಸಲಾಗಿದ್ದ ಅನುದಾನ,ನುಂಗಿ ದಲಿತರಿಗೆ ದ್ರೋಹ,ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ
WhatsApp Group Join Now
Telegram Group Join Now

ಬೆಲಗಾವಿ:- ಸರದಾರ್ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಭಾ.ಜ.ಪಾ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ ಎಸ್ ಟಿ ಸಮುದಾಯಕ್ಕೆ ಮೀಸಲಾಗಿದ್ದ ಅನುದಾನವನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡಿದ್ದು ದಲಿತರಿಗೆ ಅನ್ಯಾಯ ಮಾಡಿದೆ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕೆಂದು ಅಗ್ರಹಿಸಿದರು.

ಮಾಜಿ ಶಾಸಕ ಸಂಜಯ್ ಪಾಟೀಲ್ ಮಾತನಾಡಿ ಎಸ್ ಟಿ ನಿಗಮದಲ್ಲಿನ ಹಣವನ್ನು ಕಾಂಗ್ರೆಸ್ ಸರ್ಕಾರದ ಮಂತ್ರಿಗಳು ಮತ್ತು ಅಧಿಕಾರಿಗಳು ಸೇರಿ ಲೂಟಿ ಹೊಡೆದಿದ್ದಾರೆ ಎಂದು ಹೇಳಿದರು.ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ಮಾತನಾಡಿ ಕಾಂಗ್ರೆಸ್ ಪಕ್ಷವು ಪರಿಶಿಷ್ಟ ಜಾತಿ ಮತ್ತು ಪಂಗಡ ಮತ್ತು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ ಕಾಂಗ್ರೆಸ್ ಸರ್ಕಾರ ಎಂದರೆ ಜನರ ದುಡ್ಡನ್ನು ಲೂಟಿ ಮಾಡುವ ಸರ್ಕಾರ ಎಂದು ಹೇಳಿದರು.

ಸಂದರ್ಭದಲ್ಲಿ ಮಹಾನಗರ ಜಿಲ್ಲಾಧ್ಯಕ್ಷರಾದ ಶ್ರೀಮತಿ ಗೀತಾ ಸುತಾರ, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಸತೀಶ್ ಅಪ್ಪಾಜಿಗೊಳ ,ಶಾಸಕರಾದ ಶ್ರೀ ವಿಠ್ಠಲ್ ಹಲಗೆಕರ, ಮಾಜಿ ಶಾಸಕರಾದ ಶ್ರೀ ಮಹಾಂತೇಶ್ ದೊಡಗೌಡರ್, ಡಾ.ವಿಶ್ವನಾಥ್ ಪಾಟೀಲ್, ಶ್ರೀ ಮಹಾದೇವಪ್ಪ ಯಾದವಾಡ ,ಶ್ರೀ ಎಂ ಬಿ ಜಿರಲಿ, ಶ್ರೀ ರಾಜೇಶ್ ನೆರಲಿ, ಎಸ್ ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಬಸವರಾಜ್ ಹುಂದ್ರಿ,ರವಿ ಪಾಟೀಲ್, ಶ್ರೀ ಲಕ್ಷ್ಮಣ್ ತಪಶಿ, ಎಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಯಲ್ಲೇಶ್ ಕೋಲಕಾರ ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಯಲ್ಲಪ್ಪ ಕುರಿ ಪ್ರಮುಖ ಪದಾಧಿಕಾರಿಗಳು ಮತ್ತು ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ :-ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!