Ad imageAd image

ಮಗನನ್ನು ಸರಕಾರಿ ಶಾಲೆಯಲ್ಲಿ ಓದಿಸಲು ಮುಂದಾದ ಕೋಟಾಧಿಪತಿ!!

Bharath Vaibhav
ಮಗನನ್ನು ಸರಕಾರಿ ಶಾಲೆಯಲ್ಲಿ ಓದಿಸಲು ಮುಂದಾದ ಕೋಟಾಧಿಪತಿ!!
WhatsApp Group Join Now
Telegram Group Join Now

ಚಿಕ್ಕಮಗಳೂರು: ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವವರೇ ಹೆಚ್ಚು, ಸರ್ಕಾರಿ ಶಾಲೆಗಳ ಬಗ್ಗೆಗಿನ ನಿರ್ಲಕ್ಷ್ಯದಿಂದ ಹಲವು ಶಾಲೆಗಳು ಮುಚ್ಚಿಹೋಗುತ್ತಿವೆ. ಆದರೆ ಇಲ್ಲೊಬ್ಬರು ಶಾಲೆ ಅಭಿವೃದ್ಧಿಗೆ 2 ಕೋಟಿ ರೂ. ದೇಣಿಗೆ ನೀಡಿದ್ದಲ್ಲದೇ ಅದೇ ಸರ್ಕಾರಿ ಶಾಲೆಯಲ್ಲಿ ತಮ್ಮ ಮಗನಿಗೆ ಶಿಕ್ಷಣ ಕೊಡಿಸುವ ಮೂಲಕ ಮಾದರಿಯಾಗಿದ್ದಾರೆ.

ಮುದ್ರೆಮನೆ ಕಾಫಿ ಕ್ಯೂರಿಂಗ್ ಘಟಕದ ಮಾಲೀಕರಾದ ಸಂತೋಷ್, ಸರ್ಕಾರಿ ಶಾಲೆಯಲ್ಲಿ ಓದಿ, ನಂತರ ಕಾಫಿ ಉದ್ಯಮದಲ್ಲಿ ಸಾಧನೆ ಮಾಡಿದ್ದಾರೆ. ಸದ್ಯ ಅವರು ಕಾಫಿ ರಫ್ತು ಉದ್ಯಮ ನಡೆಸುತ್ತಿದ್ದಾರೆ. ಸಂತೋಷ ಅವರು 2 ಕೋಟಿ ರೂ. ವೆಚ್ಚದಲ್ಲಿ 8 ಕೊಠಡಿಗಳನ್ನು ಕಟ್ಟಿಸಿಕೊಟ್ಟಿದ್ದಾರೆ.

ದೇಣಿಗೆ ನೀಡಿರುವುದು ಮಾತ್ರವಲ್ಲದೆ ನಾನು ಸರಕಾರಿ ಶಾಲೆಯಲ್ಲಿ ಕಲಿತಿದ್ದೇನೆ. ನನ್ನ ಮಗನೂ ಸರ್ಕಾರಿ ಶಾಲೆಯಲ್ಲಿ ಓದಿಸಬೇಕೆಂಬ ಆಸೆಯಿಂದ ತಮ್ಮ ಮಗನನ್ನೂ ಇದೇ ಶಾಲೆಯಲ್ಲಿ ಓದಿಸುತ್ತಿದ್ದಾರೆ.

ತಾವು ಕೋಟ್ಯಧಿಪತಿಯಾಗಿದ್ದರೂ ಯಾವುದೇ ಖಾಸಗಿ ಶಾಲೆ ಮೊರೆ ಹೋಗದೆ ಸರಕಾರಿ ಶಾಲೆಗೆ ದೇಣಿಗೆ ನೀಡಿ ಶಾಲೆ ಅಭಿವೃದ್ಧಿಪಡಿಸಿದ್ದಾರೆ. ಎಲ್‌ಕೆಜಿಯಿಂದ ಏಳನೇ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 1973ರಲ್ಲಿ ಆರಂಭ ತರಗತಿವರೆಗೂ ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಇಂಗ್ಲಿಷ್‌ ಮಾಧ್ಯಮದಲ್ಲಿ 150 ಸೇರಿ 363 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

18 ಲಕ್ಷ ರೂ. ವೆಚ್ಚದಲ್ಲಿ ಸಭಾಂಗಣವನ್ನು ನಿರ್ಮಿಸಲಾಗಿದೆ, ದೇಣಿಗೆಯ ನೆರವಿನಿಂದ ‘ವಿವೇಕ ಯೋಜನೆಯ’ಡಿಯಲ್ಲಿ 56 ಲಕ್ಷ ರೂ. ವೆಚ್ಚದಲ್ಲಿ ನಾಲ್ಕು ಹೆಚ್ಚುವರಿ ತರಗತಿ ಕೊಠಡಿಗಳನ್ನು ಸೇರಿಸಲಾಗಿದೆ. ಫೆಬ್ರವರಿ 28 ರಂದು ಒಟ್ಟು 12 ತರಗತಿ ಕೊಠಡಿಗಳನ್ನು ಉದ್ಘಾಟನೆ ಮಾಡಲಾಗುತ್ತದೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!