ಕಲಬುರಗಿ : ಅಪ್ರಾಪ್ತ ವಯಸ್ಸಿನ ಬಾಲಕ-ಬಾಲಕಿ ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಕಲಬುರ್ಗಿಯಲ್ಲಿ ನಡೆದಿದೆ
ಕಲಬುರಗಿಯ ಯಡ್ರಾಮಿ ತಾಲೂಕಿನ ಮಳ್ಳಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಇಡೀ ಗ್ರಾಮವೇ ಬೆಚ್ಚಿಬಿದ್ದಿದೆಅಪ್ರಾಪ್ತರಿಬ್ಬರು ಬಳ್ಳಿ ಗ್ರಾಮದ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದೆ
ವಿಚಾರ ಮನೆಯವರಿಗೆ ತಿಳಿಯಬಹುದು ಎಂಬ ಆತಂಕದಿಂದ ಅಪ್ರಾಪ್ತರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಯಾವದೇ ಡೆತ್ ನೋಟ್ ಪತ್ತೆಯಾಗಿಲ್ಲವಾದ್ದರಿಂದ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ




