Ad imageAd image

ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ 

Bharath Vaibhav
ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ 
WhatsApp Group Join Now
Telegram Group Join Now

ಬೆಂಗಳೂರು : ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಮೈಸೂರಿನಲ್ಲಿಅ.3 ರಿಂದ 12 ರವರೆಗೆ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಅ.12 ರಂದು ಜಂಬೂ ಸವಾರಿ ನಡೆಯಲಿದೆ.

 ಈ ಬಾರಿ ಅದ್ದೂರಿಯಾಗಿ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅಕ್ಟೋಬರ್ 3 ರಿಂದ 12 ರವರೆಗೆ ದಸರಾ ಮಹೋತ್ಸವ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅ.3 ರಿಂದ 12 ರವರೆಗೆ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಅಕ್ಟೋಬರ್ 3 ರಂದು ಬೆಳಗ್ಗೆ 9 ಗಂಟೆ 10 ನಿಮಿಷಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪೂಜೆ ನೆರವೇರಿಸಿ ನಂತರ ದಸರಾ ಉದ್ಘಾಟನೆ ಮಾಡಲಾಗುತ್ತಿದೆ.

ಅ.12 ರ ಮಧ್ಯಾಹ್ನ 12 :10 ಕ್ಕೆ ಜಂಬೂ ಸವಾರಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ದಸರಾ ಉದ್ಘಾಟಕರ ಹೆಸರು ಅಂತಿಮವಾಗಿಲ್ಲ. ಮುಂದೆ ಚರ್ಚೆ ನಡೆಸಿ ಯಾರು ದಸರಾ ಉದ್ಘಾಟಿಸಬೇಕೆಂದು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!