ಬೆಂಗಳೂರು: ರಾಜ್ಯ ಸರ್ಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯ್ದಿರಿಸಿ ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.
ಈ ಬಾರಿಯ ಆಯವ್ಯಯ ಮಂಡನೆಯ ವೇಳೆ ಸಿಎಂ ಸಿದ್ದರಾಮಯ್ಯ ಘೋಷಿಸಿದ ಈ ಮೀಸಲಾತಿ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಕೋಲಾಹಲಕ್ಕೆ ಕಾರಣವಾಗಿತ್ತು.ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವಂತಿಲ್ಲ ಎಂದು ಬಿಜೆಪಿ ಈ ನಡೆಯನ್ನು ಖಂಡಿಸಿತ್ತು.
ಈ ಮಸೂದೆಯನ್ನು ರಾಜ್ಯ ಸರ್ಕಾರ ಅನುಮೋದನೆ ಪಡೆಯಲು ರಾಷ್ಟ್ರಪತಿಗಳಿಗೆ ಕಡತವನ್ನು ಕಳುಹಿಸಲಿದೆ.ಉಭಯ ಸದನಗಳಲ್ಲೂ ಮಸೂದೆ ಅಂಗೀಕರವಾಗಿದ್ದರೂ,ಈ ಮಸೂದೆಯನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ ಮಾಡಿತ್ತು.