ಬೆಳಗಾವಿ: ತಾಲೂಕಿನ ಕಂಗ್ರಾಳಿ ಬಿ ಕೆ ಗ್ರಾಮದ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೈಸರ ಬಂಡೆ ನವಾಜ್ ಸೈಯದ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲಾಯಿತು. ಶುಕ್ರವಾರ ದಿನಾಂಕ 31/01/2025 ರಂದು 34 ಸದಸ್ಯರಲ್ಲಿ 27 ಗ್ರಾಮ ಪಂಚಾಯತ್ ಸದಸ್ಯರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೈಸರ್ ಬಂದೇನವಾಜ್ ಸೈಯದ್ ಅವರನ್ನು ಆಯ್ಕೆ ಮಾಡಿದರು ಅವಿಶ್ವಾಸ ಗೊತ್ತುವಳಿ ಮಂಡನೆ ವೇಳೆ 7 ಗ್ರಾಮ ಪಂಚಾಯತಿ ಸದಸ್ಯರು ಹಾಜರಿರಲಿಲ್ಲ ಎಂದು ಚುನಾವಣಾಧಿಕಾರಿ ಹಾಗೂ ಬೆಳಗಾವಿ ಜಿಲ್ಲಾಧಿಕಾರಿ ದಿನೇಶ್ ಕುಮಾರ್ ಮೀನಾ (ಐಎಎಸ್) ಮಾಧ್ಯಮದವರೊಂದಿಗೆ ಮಾತನಾಡುತ್ತಾ ತಿಳಿಸಿದರು.
ಅಲ್ಲದೆ ಕಂಗ್ರಾಳಿ ಬಿ ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಖಾಲಿ ಇದೆ. ಈ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸಿ ಎಂಟರಿಂದ ಹತ್ತು ದಿನಗಳಲ್ಲಿ ಮುಂದಿನ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದರು ಗ್ರಾಮ ಪಂಚಾಯಿತಿ ಸದಸ್ಯರಾದ ಜೈರಾಮ ಪಾಟೀಲ, ಅನಿಲ ಪಾವಶೆ ಮಾತನಾಡಿ, ಕಂಗ್ರಾಳಿ ಬುದ್ರುಕ ಗ್ರಾಮದ ಅಭಿವೃದ್ಧಿ ಕುಂಠಿತವಾಗಿದೆ. ಕಳೆದ 6ರಿಂದ 7 ತಿಂಗಳಿಂದ ಗ್ರಾ.ಪಂ.ಗೆ ಅಧ್ಯಕ್ಷರು ಬಂದಿಲ್ಲ. ಇದರಿಂದ ಗ್ರಾಮದ ಸಂಪೂರ್ಣ ಅಭಿವೃದ್ಧಿ ಸ್ಥಗಿತಗೊಂಡಿದೆ. ಯಾವುದೇ ಕಾಮಗಾರಿ ಪೂರ್ಣಗೊಂಡಿಲ್ಲ. ಅದಕ್ಕಾಗಿ ಸೈಯದ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರತೀಕ್ ಚಿಟಗಿ