ಧಾರವಾಡ : –ಹುಬ್ಬಳ್ಳಿ ಧಾರವಾಡ ನಗರ ವ್ಯಾಪ್ತಿಯಲ್ಲಿ ಮುಂಬರುವ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಸಾರ್ವಜನಿಕರ ಶಾಂತಿ, ಸುರಕ್ಷತೆ ಮತ್ತು ಭದ್ರತೆ ಸೇರಿದಂತೆ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ರೌಡಿಶೀಟರ್ ಗಳ ಪರೇಡ್ ನಡೆಸಲಾಯಿತು.
* ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಒಟ್ಟು 862 ಜನ ರೌಡಿಶೀಟರ್ ಹಾಜರಾಗಿದ್ದರು.
* ಒಟ್ಟು 08 ರೌಡಿಶೀಟರ್ ಗಳು ಈಗಾಗಲೇ ಗಡಿಪಾರು ಆಗಿರುತ್ತಾರೆ.
* 295 ಜನರ ರೌಡಿ ಶೀಟರ್ಸ್ ವಿರುದ್ಧ ಮುಚ್ಚಳಿಕೆ ಪತ್ರ ಬರೆಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ.
* 15 ಜನ ರೌಡಿಶೀಟರ್ ಗಳ ವಾರಂಟ್ ಇರುತ್ತವೆ.
* ಈಗಾಗಲೇ ಎಲ್ಲ ರೌಡಿಶೀಟರ್ ಗಳ ಮೇಲೆ ನಿಗಾ ವಹಿಸಿದ್ದು ಸಾರ್ವಜನಿಕರ ಶಾಂತಿ ನೆಮ್ಮದಿ ಮತ್ತು ಕಾನೂನು ಸುವ್ಯವಸ್ಥೆ ಹಾಳು ಮಾಡುವಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.
* ಒಂದು ವೇಳೆ ಅಂತಹ ಚಟುವಟಿಕೆಗಳಲ್ಲಿ ತೊಡಗಿದ್ದರ ಬಗ್ಗೆ ಕಂಡುಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.
ರೌಡಿ ಚಟುವಟಿಕೆಗಳನ್ನು ಬಿಟ್ಟು ಮುಖ್ಯವಾಹಿನಿಗೆ ಬಂದು ಸುಧಾರಣೆಯಾಗುತ್ತೇವೆಂದು ಮನವಿ ನೀಡಿದವರ ಬಗ್ಗೆ ಪರಿಶೀಲಿಸಲಾಗುವುದು.ಎಂದು ಮಾಹಿತಿ ನೀಡಿದರು.
ಸಂಧರ್ಭದಲ್ಲಿ ಧಾರವಾಡ ಪೊಲೀಸ್ ಕಮಿಷನರ್ ಏನ್ ಶಶಿಕುಮಾರ್ ಸರ್ ಹಾಗೂ ಠಾಣೆಯ ಪೊಲೀಸ್ ಅಧಿಕಾರಿಗಳು ಇದ್ದರು.
ವರದಿ: ವಿನಾಯಕ ಗುಡ್ಡದಕೇರಿ