Ad imageAd image
- Advertisement -  - Advertisement -  - Advertisement - 

ವಾಕಿಂಗ್ ಹೋಗುತ್ತಿದ್ದ ಮಹಿಳೆಯನ್ನ ಬಲವಂತವಾಗಿ ತಬ್ಬಿಕೊಂಡು ಚುಂಬಿಸಿದ ವಿಕೃತ ಕಾಮಿ

Bharath Vaibhav
ವಾಕಿಂಗ್ ಹೋಗುತ್ತಿದ್ದ ಮಹಿಳೆಯನ್ನ ಬಲವಂತವಾಗಿ ತಬ್ಬಿಕೊಂಡು ಚುಂಬಿಸಿದ ವಿಕೃತ ಕಾಮಿ
WhatsApp Group Join Now
Telegram Group Join Now

ಬೆಂಗಳೂರು: ಬೆಂಗಳೂರಿನಲ್ಲಿ ವಾಕಿಂಗ್ ಹೋಗುತ್ತಿದ್ದ ಮಹಿಳೆಯನ್ನು ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿಕೊಂಡು ಚುಂಬಿಸಿದ ಆಘಾತಕಾರಿ ಘಟನೆ ನಡೆದಿದೆ.

ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್ 2ರಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಕೋಣನಕುಂಟೆ ಸಮೀಪದ ಕೃಷ್ಣ ನಗರದಲ್ಲಿ ವಾಕಿಂಗ್ ಹೋಗಲು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನು ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ.

ಮಹಿಳೆ ತಪ್ಪಿಸಿಕೊಂಡು ಓಡಿದರೂ ಹಿಂದೆಯೇ ಓಡಿ ಬಂದು ಕಿರುಕುಳ ನೀಡಿದ್ದಾನೆ. ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದ್ದು, ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!