Ad imageAd image

ಜೈಲಿನಲ್ಲಿ ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ದರ್ಶನ್ ಫೋಟೊ ವೈರಲ್

Bharath Vaibhav
ಜೈಲಿನಲ್ಲಿ ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ದರ್ಶನ್ ಫೋಟೊ ವೈರಲ್
WhatsApp Group Join Now
Telegram Group Join Now

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿದೆಯೇ ಎಂಬ ಅನುಮಾನ ಬಲವಾಗಿದೆ. ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದರೂ ಜೈಲಿನಲ್ಲಿ ದರ್ಶನ್ ಆರಾಮವಾಗಿ ಸಕಲ ಸೌಲಭ್ಯಗಳೊಂದಿಗೆ ಕಾಲಕಳೆಯುತ್ತಿರುವಂತಿದೆ.

ಜೈಲಿನಲ್ಲಿ ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ದರ್ಶನ್ ಫೋಟೊ ವೈರಲ್ ಆಗಿದ್ದು, ಸಾಕಷ್ಟು ಅಚ್ಚರಿ, ಅನುಮಾನಗಳಿಗೆ ಕಾರಣವಾಗಿದೆ.

ನಟ ದರ್ಶನ್ ಜೈಲಿನ ಸ್ಪೆಷಲ್ ಬ್ಯಾರಕ್ ನಿಂದ ಆಚೆ ಕುಳಿತುಕೊಂಡಿರುವ ಹಾಗೂ ರೌಡಿಯೊಬ್ಬರ ಜೊತೆ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ಫೋಟೋ ವೈರಲ್ ಆಗಿದೆ.

ಒಂದು ಕೈಯಲ್ಲಿ ಸಿಗರೇಟ್ ಹಿಡಿದು, ಮತ್ತೊಂದು ಕೈಯಲ್ಲಿ ಕಾಫಿ ಮಗ್ ಹಿಡಿದು ನಾಲ್ಕು ಜನರೊಂದಿಗೆ ಆರಾಮವಾಗಿ ಕುಳಿತು ನಗುತ್ತಾ ಮಾತನಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಎರಡು ದಿನಗಳ ಹಿಂದೆ ಸಿಸಿಬಿ ಅಧಿಕಾರಿಗಳು ಜೈಲಿನ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ದರ್ಶನ್ ಬ್ಯಾರಕ್ ನಿಂದ ಹೊರ ಕುಳಿತಿದ್ದರು ಎನ್ನಲಾಗಿದೆ.

ರೌಡಿ ಶಿಟರ್ ವಿಲ್ಸನ್ ಗಾರ್ಡನ್ ನಾಗ, ದರ್ಶನ್ ಮ್ಯಾನೇಜರ್ ನಾಗರಾಜ್ ಹಾಗೂ ಇನ್ನೋರ್ವ ವ್ಯಕ್ತಿಯ ಜೊತೆ ಚೇರ್ ಮೇಲೆ ಸಿಗರೇಟ್ ಸೇದುತ್ತಾ, ಕಾಫಿ ಮಗ್ ಕೈಯಲ್ಲಿ ಹಿಡಿದು ಕುಳಿತಿರುವ ಫೋಟೋ ವೈರಲ್ ಆಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!