ಸಿಂಧನೂರು : ಸೆ 12, ಅಲ್ಪಸಂಖ್ಯಾತರ ವಸತಿ ನಿಲಯದ ವಿದ್ಯಾರ್ಥಿನಿಯರ ಬೇಡಿಕೆ ಈಡೇರಿಸಲು ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ ಪರಿಣಾಮ ವಿದ್ಯಾರ್ಥಿನಿಯರು, ತಹಶೀಲ್ದಾರ್ ಕಚೇರಿಗೆ ಬಂದು ಪ್ರತಿಭಟಿಸುವುದೆ ಒಂದು ಕಾಯಕವಾಗಿದೆ.
ಸರ್ಕಾರ ಶೈಕ್ಷಣಿಕ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಗಾಗಿ ವಾರ್ಷಿಕ 5 ಸಾವಿರ ಕೋಟಿ ಅನುದಾನ ಬಿಡುಗಡೆ ಗೊಳಿಸುತ್ತಿದ್ದು, ಶಿಕ್ಷಣ ಕ್ಷೇತ್ರಕ್ಕೆ ಮೊದಲನೆ ಆದ್ಯತೆ ನೀಡಲಾಗುತ್ತಿದೆ ಎಂದು ಚುನಾಯಿತ ಜನಪ್ರತಿನಿಧಿಗಳು ಹೇಳುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ ಆದರೆ ಶೈಕ್ಷಣಿಕ ಅಭಿವೃದ್ಧಿಗಾಗಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಪೂರಕವಾದಂತಹ ವಾತಾವರಣ ಕಲ್ಪಿಸಬೇಕಾಗಿರುವುದು ಜನಪ್ರತಿನಿಧಿಗಳ ಹಾಗೂ ಸಂಬಂಧಿಸಿದ ಅಧಿಕಾರಿಗಳ ಜವಾಬ್ದಾರಿ ನಗರದ ಶಿವಜ್ಯೋತಿ ಅಲ್ಪಸಂಖ್ಯಾತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರತಿಭಟಿಸುವುದು ಅನಿವಾರ್ಯವಾಗಿದೆ.
ಪ್ರಮುಖವಾಗಿ ವಸತಿ ನಿಲಯದ ಅಡುಗೆ ಸಿಬ್ಬಂದಿಗಳ ಮತ್ತು ವಾರ್ಡನ್ ಬದಲಾವಣೆ, ಸೇರಿದಂತೆ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದಂತಹ ಮೂಲಭೂತ ಸೌಕರ್ಯ ಒದಗಿಸುವಂತೆ ಹಾಗೂ ಹಾಸ್ಟೆಲ್ ಸುತ್ತಮುತ್ತ ಕುಡುಕರ ಹಾವಳಿ ತಪ್ಪಿಸಬೇಕು ವಿದ್ಯಾರ್ಥಿನಿಯರ ಬೇಡಿಕೆಯಾಗಿದ್ದು, ಕಳೆದ ಮೂರು ತಿಂಗಳ ಹಿಂದೆ ಈ ಬೇಡಿಕೆಗಳನ್ನು ಇಟ್ಟುಕೊಂಡು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದರು.
ಈಗ ಪುನಃ ಬೇಡಿಕೆಗಳು ಈಡೇರದ ಪರಿಣಾಮ ವಿದ್ಯಾರ್ಥಿನಿಯರು ತಹಶೀಲ್ದಾರ್ ಕಚೇರಿಗೆ ಆಗಮಿಸಿ ಪ್ರತಿಭಟಿಸಿ ತಮ್ಮ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಇನ್ನಾದರೂ ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿದ್ಯಾರ್ಥಿನಿಯರ ಬೇಡಿಕೆಗಳನ್ನು ಈಡೇರುಸುತ್ತಾರ ಕಾದು ನೋಡಬೇಕು.
ವರದಿ : ಬಸವರಾಜ ಬುಕ್ಕನಹಟ್ಟಿ.




