ಚಾಮರಾಜನಗರ: – ಹೆಬ್ಬಸೂರು ಗ್ರಾಮದ ತೋಟದ ಮನೆಯಲ್ಲಿ ಕಾಣಿಸಿಕೊಂಡ ಭಾರಿ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ.

ಚಾಮರಾಜನಗರ ತಾಲ್ಲೂಕಿನ ಹೆಬ್ಬಸೂರು ಗ್ರಾಮದ ಶಶಿಕುಮಾರ್ ಎಂಬುವವರು ತೋಟದ ಮನೆಯಲ್ಲಿ ಮಂಗಳವಾರ ಮಧ್ಯಾಹ್ನ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ. ಹೆಬ್ಬಾವು ನೋಡಿ ಭಯಗೊಂಡ ಶಶಿಕುಮಾರ್ ಕೂಡಲೇ ತೋಟದ ಮಾಲೀಕ ಸ್ನೇಕ್ ಅಶೋಕ್ ಅವರಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಸ್ನೇಕ್ ಅಶೋಕ್ ಅವರು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟರು. ಬಳಿಕ ಕುಟುಂಬದವರು ನಿಟ್ಟುಸಿರು ಬಿಟ್ಟರು.
ವರದಿ :ಸ್ವಾಮಿ ಬಳೇಪೇಟೆ




