ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಅಪರಿಚಿತ ವ್ಯಕ್ತಿ ಹಿಂದಿನಿಂದ ಬಂದು ಯುವತಿಯ ಖಾಸಗಿ ಅಂಗವನ್ನು ಸ್ಪರ್ಶಿಸಿ ಪರಾರಿಯಾಗಿದ್ದ. ಸುದ್ದಗುಂಟೆಪಾಳ್ಯದಲ್ಲಿ ನಡೆದಿದ್ದ ಈ ಘಟನೆ ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. ಈ ಘಟನೆ ಮಾಸುವ ಮುನ್ನವೇ ಅಷ್ಟರಲ್ಲಿ ಮತ್ತೊಂದು ನೀಚ ಕೃತ್ಯ ನಡೆದಿದೆ. ಓರ್ವ ಕಿಡಿಗೇಡಿ ಯುವತಿ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿರುವಂತಹ ಘಟನೆ ಮಾರತ್ತಹಳ್ಳಿಯಲ್ಲಿ ನಡೆದಿದೆ. ಸದ್ಯ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏಪ್ರಿಲ್ 30ರ ರಾತ್ರಿ 11:30ರ ವೇಳೆಗೆ ಯುವತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಿಡಿಗೇಡಿ ಯುವತಿಯನ್ನು ಸ್ಪರ್ಶಿಸಿ ಅನುಚಿತವಾಗಿ ವರ್ತಿಸಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಮಾರತ್ತಹಳ್ಳಿ ಠಾಣೆ ಪೊಲೀಸರು, ಕಿಡಿಗೇಡಿಗೆ ಬಲೆ ಬೀಸಿದ್ದಾರೆ. ಘಟನೆ ಸಂಬಂಧ ಸುತ್ತಮುತ್ತಲಿನ ಸಿಸಿಟಿವಿಗಳ ಪರಿಶೀಲನೆ ನಡೆಸಿದ್ದಾರೆ.




