ಬೆಂಗಳೂರು : ರಾಜ್ಯ ಸರ್ಕಾರವು ಮದ್ಯಪ್ರಿಯರಿಗೆ ಶಾಕ್ ನೀಡಲು ಮುಂದಾಗಿದ್ದು, ಶೀಘ್ರವೇ ಬಿಯರ್ ದರ ಏರಿಕೆ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಸರ್ಕಾರವು ಶೀಘ್ರವೆ ಬಿಯರ್ ಬೆಲೆಯಲ್ಲಿ 10 ರಿಂದ 20 ರೂ.ವರೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ ಎನ್ನಲಾಗಿದ್ದು, ಬಿಯರ್ ನಲ್ಲಿನ ಅಲ್ಕೋಹಾಲ್ ಅಂಶದ ಮೇಲೆ ದರ 10 ರಿಂದ 20 ರೂ.ವರೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ ಎಂದು ಹೇಳಲಾಗಿದೆ.
ಕಡಿಮೆ ಆಲ್ಕೋಹಾಲ್ ಅಂಶವಿರುವ ಬಿಯರ್ ಗಳ ಬೆಲೆ ಯಥಾಸ್ಥಿತಿ ಇರಲಿದ್ದು, ಸ್ಟ್ರಾಂಗ್ ಬಿಯರ್ಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಜನವರಿ 20 ರಿಂದ ದರ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಬಿಯರ್ ಪ್ರಿಯರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ.