ಬೀದರ್: ಪರೀಕ್ಷೆಗೆ ಹೆದರಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಡಿರುವಂತ ಶಾಕಿಂಗ್ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯಲ್ಲೇ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಶರತ್(16) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ.
ಬೀದರ್ ನ ಮಂಠಾಳದ ಶರತ್, ನಾರಾಯಣಪುರ ಗ್ರಾಮದಲ್ಲಿರುವಂತ ನವೋದಯ ವಸತಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದನು. ಡೆತ್ ನೋಟ್ ಬರೆದಿಟ್ಟು, ಹಾಸ್ಟೆಲ್ ನಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ವಿದ್ಯಾರ್ಥಿ ಶರತ್ ಬರೆದಿರುವಂತ ಡೆತ್ ನೋಟ್ ನಲ್ಲಿ ಮಮ್ಮಿ ಸಾರಿ, ಅಪ್ಪ ಐ ಲವ್ ಯು ಹಾಗೂ ಕೀಪ್ ಸ್ಮೈಲಿಂಗ್ ಫಾರೆವರ್ ಅಂತ ಬರೆದಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಭಯದಿಂದ ವಿದ್ಯಾರ್ಥಿ ಹೀಗೆ ಮಾಡಿಕೊಂಡಿದ್ದಾನೆ ಎಂಬುದಾಗಿ ಶಂಕಿಸಲಾಗಿದೆ. ಈ ಸಂಬಂಧ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




