Ad imageAd image

ಕೇಸರಹಟ್ಟಿಯಲ್ಲಿ ತಾಯಿಯ ಸಾವಿನ ನಂತರವೂ ಪರೀಕ್ಷೆ ಬರೆದ ವಿದ್ಯಾರ್ಥಿ

Bharath Vaibhav
ಕೇಸರಹಟ್ಟಿಯಲ್ಲಿ ತಾಯಿಯ ಸಾವಿನ ನಂತರವೂ ಪರೀಕ್ಷೆ ಬರೆದ ವಿದ್ಯಾರ್ಥಿ
WhatsApp Group Join Now
Telegram Group Join Now

ಗಂಗಾವತಿ(ಕೊಪ್ಪಳ): ಹೊತ್ತು – ಹೆತ್ತವ್ವನ ಪ್ರೀತಿ, ಮಮತೆಗೆ ಬೆಲೆ ಕಟ್ಟಲಾಗದು. ಮಕ್ಕಳ ವಿಚಾರಕ್ಕೆ ಬಂದರೆ ಎಂಥಹ ತ್ಯಾಗಕ್ಕಾದರೂ ತಾಯಿ ಸಿದ್ಧಳಿರುತ್ತಾಳೆ. ಅಂತಹ ತಾಯಿಯ ಅಗಲಿಕೆಯ ನೋವಿನ ಮಧ್ಯೆಯೂ ವಿದ್ಯಾರ್ಥಿಯೊಬ್ಬ ಪರೀಕ್ಷೆ ಬರೆದ ಘಟನೆ ತಾಲೂಕಿನ ಕೇಸರಹಟ್ಟಿಯಲ್ಲಿ ನಡೆದಿದೆ.

ಗ್ರಾಮದ ಸ್ವಾಮಿ ವಿವೇಕಾನಂದ ಇಂಗ್ಲಿಷ್​ ಮೀಡಿಯಂ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅಡಿವೆಯ್ಯ ಸ್ವಾಮಿ ಎಂಬ ಹತ್ತನೇ ತರಗತಿಯ ವಿದ್ಯಾರ್ಥಿಯ ತಾಯಿ ವಿಜಯಲಕ್ಷ್ಮಿ ಸಿದ್ದಯ್ಯಸ್ವಾಮಿ (38) ಶುಕ್ರವಾರ ಬೆಳಗಿನ ಸಮಯದಲ್ಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಾಯಿಯ ಅಗಲಿಕೆಯ ಸುದ್ದಿಯ ಮಧ್ಯೆಯೂ ಧೃತಿಗೆಡದ ವಿದ್ಯಾರ್ಥಿ ತನ್ನ ಕುಟುಂಬದವರ ಮನವೊಲಿಸಿ ಪರೀಕ್ಷೆ ಬರೆಯುವುದಾಗಿ ತಿಳಿಸಿದ್ದ.

ವಿದ್ಯಾರ್ಥಿ ಮನೆಗೆ ಬಂದ ಶಿಕ್ಷಕರುನೋವಿನಲ್ಲಿದ್ದ ವಿದ್ಯಾರ್ಥಿ ಅಡಿವೆಯ್ಯ ಸ್ವಾಮಿ ಮನೆಗೆ ಬಂದ ಶಿಕ್ಷಕರು ಸಾಂತ್ವಾನ ಹೇಳಿದರು. ಬಳಿಕ ಪರೀಕ್ಷಾ ಕೇಂದ್ರದವರೆಗೆ ಕರೆದೊಯ್ಯಲು ನೆರವಾದರು. ಪರೀಕ್ಷೆಯ ಬಳಿಕ ವಿದ್ಯಾರ್ಥಿ ತನ್ನ ತಾಯಿಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ.

ವಿದ್ಯಾರ್ಥಿ ತಾಯಿ ವಿಜಯಲಕ್ಷ್ಮಿ ಕಳೆದ ಕೆಲ ದಿನಗಳ ಹಿಂದೆ ಸ್ನಾನದ ಕೋಣೆಯಲ್ಲಿ ಬಿದ್ದು ತಲೆಗೆ ಗಾಯ ಮಾಡಿಕೊಂಡಿದ್ದರು. ಪರಿಣಾಮ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಹೀಗಾಗಿ, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ರಾತ್ರಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ, ಶುಕ್ರವಾರ ಬೆಳಗ್ಗೆ ವಿಜಯಲಕ್ಷ್ಮಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

WhatsApp Group Join Now
Telegram Group Join Now
Share This Article
error: Content is protected !!