ಹಾಸನ: ಕಳೆದ ವಾರವಷ್ಟೇ ಪಟ್ಟಣದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಇನ್ನು ನೆನಪಿನಲ್ಲಿರುವಾಗಲೇ ಇಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ಪದವಿ ಅಂತಿಮ ವರ್ಷದಲ್ಲಿ ಊದುತ್ತಿರುವ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.
21 ವರ್ಷ ವಯಸ್ಸಿನ ಕವನ ಕೆ.ವಿ. ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ. ಈ ವಿದ್ಯಾರ್ಥಿನಿ ಸರಕಾರಿ ಪದವಿ ಕಾಲೇಜಿನಲ್ಲಿ ಅಂತಿಮ ವರ್ಷದಲ್ಲಿ ಓದುತ್ತಿದ್ದಳು. ಪಾಪಣ್ಣ ಹಾಗೂ ಗಾಯತ್ರಿ ದಂಪತಿಗಳ ಮಗಳಾಗಿದ್ದು, ಈಕೆ ಪದವಿ ಅಂತಿಮ ವರ್ಷದ ಪರೀಕ್ಷೆ ಬರೆಯುತ್ತಿದ್ದು, ಮೂರು ವಿಷಯಗಳ ಪರೀಕ್ಷೆ ಬರೆದಿದ್ದು, ಇನ್ನು 3 ವಿಷಯಗಳ ಪರೀಕ್ಷೆ ಬರೆಯಬೇಕಾಗಿತ್ತು.




