Ad imageAd image

ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ಶೀಘ್ರದಲ್ಲಿ ಲೋಕಾರ್ಪಣೆ ಭರವಸೆ

Bharath Vaibhav
ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ಶೀಘ್ರದಲ್ಲಿ ಲೋಕಾರ್ಪಣೆ ಭರವಸೆ
WhatsApp Group Join Now
Telegram Group Join Now

ಮಕ್ಕಳಲ್ಲಿ ಖಗೋಳದಲ್ಲಿ ಆಸಕ್ತಿ ಹೆಚ್ಚಿಸಲು ವಿಜ್ಞಾನ ಕೇಂದ್ರಗಳ ಸ್ಥಾಪನೆ: ಸಚಿವ ಎನ್.ಎಸ್.ಭೋಸರಾಜು

ಬೆಳಗಾವಿ: ರಾಜ್ಯ ಸರ್ಕಾರ ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನದ‌ ಕುರಿತು ಆಸಕ್ತಿ ಹಾಗೂ ಹೆಚ್ಚಿನ ಜ್ಞಾನ ಒದಗಿಸುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಹಿಡಕಲ್ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ತಿಳಿಸಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಜಲಸಂಪನ್ಮೂಲ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ
ಹಿಡಕಲ್‌ ಉದ್ಯಾನಕಾಶಿಯಲ್ಲಿ ಸೋಮವಾರ(ಜ.20) ರಾಜಾ ಲಖಮಗೌಡ ಉದ್ಯಾನಕಾಶಿ ಅಭಿವೃದ್ಧಿ ಯೋಜನೆಯಡಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 8 ರಿಂದ 9 ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪನೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸುವುದರ ಜೊತೆಯಲ್ಲೇ, ವಿಜ್ಞಾನ ಅಧ್ಯಯನ ಹಾಗೂ ಸಂಶೋಧನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.

ಬೆಂಗಳೂರಿನ ಹೆಬ್ಬಾಳದಲ್ಲಿ ಏಷಿಯಾ ಖಂಡದಲ್ಲಿ ನಂಬರ್ ಒನ್ ಮಾದರಿಯಲ್ಲಿ ಸೈನ್ಸ್ ಗ್ಯಾಲರಿ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಪ್ರತಿ‌ ಜಿಲ್ಲೆಗಳಲ್ಲಿ ತಾರಾಲಯ‌ ನಿರ್ಮಾಣಕ್ಕೆ ಅನುದಾನ ಒದಗಿಸಲಾಗಿದೆ. ಚಿಕ್ಕಮಗಳೂರ‌ ಜಿಲ್ಲೆಯ ಪಿಲಿಕುಳಿಯಲ್ಲಿ 350 ಎಕರೆ ಪ್ರದೆಶದಲ್ಲಿ‌ ದೇಶದಲ್ಲಿ‌ಯೇ ಅತಿ ದೊಡ್ಡ ತಾರಾಲಯವನ್ನು ಸ್ಥಾಪಿಸಲಾಗಿದೆ. ಸರಕಾರದ ವತಿಯಿಂದ ರಾಜ್ಯದ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ವಿತರಣೆ ಹಾಗೂ ಲ್ಯಾಬರೋಟರಿಗಳನ್ನು‌ ಸ್ಥಾಪಿಸಲಾಗುವದು.

ಇಂದು ತಾರಾಲಯ‌ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಸಲಾದ ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸದ್ದಲ್ಲಿ ಈ ತಾರಾಲಯವನ್ನು ಇನ್ನೂ ಮೇಲ್ದರ್ಜೆಗೆ ಏರಿಸಲು‌ ಕ್ರಮ‌ವಹಿಸಲಾಗುವುದು ಎಂದು‌ ಸಚಿವರಾದ ಎನ್.ಎಸ್.ಭೋಸರಾಜು ಅವರು ಹೇಳಿದರು.

ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಮಾತನಾಡಿ ವಿಜ್ಞಾನ ಕೇಂದ್ರದ ನಿರ್ಮಾಣಕ್ಕೆ ಮೊದಲ ಹಂತದಲ್ಲಿ ಈಗಾಗಲೇ 13 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಭಾಗದ ವಿದ್ಯಾರ್ಥಿಗಳಿಗೆ ತಾರಾಲಯ ಉಪಯೋಗವಾಗಲಿದೆ ಎಂದರು.

ಜಿಲ್ಲೆಯಲ್ಲಿ ಪ್ರವಾಸೊದ್ಯಮಕ್ಕೆ ಉತ್ತೇಜನ ನೀಡುವ ಹಾಗೂ ಪ್ರವಾಸಿಗರಿಗೆ ಅನುಕೂಲವಾಗುವಂತೆ ಪ್ರವಾಸಿ ಸರ್ಕಿಟ್ ನಿರ್ಮಿಸಲು ಗೋಕಾಕ ಫಾಲ್ಸ್, ಬೆಳಗಾವಿಯ ರಾಣಿ ಚನ್ನಮ್ಮ‌ ಮೃಗಾಲಯ ಹಾಗೂ ಹಿಡಕಲ್ ಡ್ಯಾಂ‌ ಯೋಜ‌ನೆಯೊಂದಿಗೆ ಪ್ರವಾಸಿ ಸರ್ಕಿಟ್ ನಿರ್ಮಿಸುವ ಯೋಜನೆ ಸರಕಾರದ್ದಾಗಿದೆ. ಹಿಡಕಲ್ ಡ್ಯಾಂ ಹಿನ್ನೀರಿನಲ್ಲಿ ಜಲಕ್ರೀಡೆಗಳಿಗೂ ಪ್ರಾಶಸ್ತ್ಯವಾಗಿದ್ದು ಈ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು.

ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಜಿಲ್ಲೆಯ ವಿವಿಧೆಡೆ ಬಹಳಷ್ಟು ಅಭಿವೃಧ್ದಿ ಕಾಮಗಾರಿಗಳನ್ನು ಕೈಗೆತ್ತಿಗೊಳಗಿದೆ. ಆದಷ್ಟು ಬೇಗ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ಶೀಘ್ರದಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು.

ಹುಕ್ಕೇರಿ ಶಾಸಕ ನಿಖಿಲ್ ಕತ್ತಿ ಅವರು ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದ ಮೊದಲ ಯೋಜನೆ ಇದಾಗಿದೆ. ನೀರಾವರಿ ಇಲಾಖೆಯಿಂದ 35 ಎಂ.ಐ ಟ್ಯಾಂಕ್, ಹನಿ ನೀರಾವರಿ, 19 ಕೆರೆಗಳ ತುಂಬುವ ಯೋಜನೆ ಸೇರಿದಂತೆ ಹುಕ್ಕೇರಿ ತಾಲೂಕಿನ ಅಭಿವೃದ್ಧಿಗೆ 30 ಕೋಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಚಾಲನೆಯಲ್ಲಿವೆ ಎಂದು ಮಾಹಿತಿ ನೀಡಿದರು.

ಹುಕ್ಕೇರಿ ತಹಶೀಲ್ದಾರ್ ಮಂಜುಳಾ ನಾಯಕ, ಕರ್ನಾಟಕ ನೀರಾವರಿ ನಿಗಮ ನಿಯಮಿತ ಬೆಳಗಾವಿ ಉತ್ತರ ವಲಯದ ಮುಖ್ಯ ಇಂಜಿನಿಯರ್ ಬಿ.ಆರ್ ರಾಠೋಡ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ, ನೀರಾವರಿ ಇಲಾಖೆ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!