ಬಾಗಲಕೋಟೆ :ತಾಲೂಕಿನ ದಾನಮ್ಮ ನಂದಿಗಿರಿ ಶಿಕ್ಷಕಿಯು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ, ವಿಧಿಯಾಟ ಶಿಕ್ಷಕಿ ಕಾರ್ಯನಿರ್ವಹಿಸುತ್ತಿರುವಾಗಲೇ ಅಪಘಾತ ಸಂಭವಿಸಿದ ಕಾರಣ, ಶಿಕ್ಷಕಿ ಸಾವನ್ನಪ್ಪಿದ್ದಾರೆ.
ಈ ಸುದ್ದಿ ತಿಳಿದ ಕೂಡಲೇ ಕರ್ನಾಟಕ ರಾಜ್ಯ ಪ್ರಾರ್ಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ನುಗ್ಲಿ ಅವರು ದೂರವಾಣಿಯ ಮೂಲಕ ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ತುಳಸಿ ಮದ್ದಿನೇನಿ ಐ ಎ ಎಸ್ ಅಧಿಕಾರಿ ಅವರೊಂದಿಗಿ ದೂರವಾಣಿಯ ಮೂಲಕ ಸಂಪರ್ಕಿಸಿ ಪರಿಹಾರಕ್ಕೆ ಆಗ್ರಹಿಸಿದ ಬೆನ್ನಲ್ಲೇ ಬಾಗಲಕೋಟೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡುವುದಾಗಿ ಸೂಕ್ತ ಪರಿಹಾರಕ್ಕೆ ಭರವಸೆ ನೀಡಿದರು.
ಹಾಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಶಿಕ್ಷಕಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ವರದಿ: ಅಲಿ ಮಕಾನದಾರ




