ಕೊಳ್ಳೇಗಾಲ: ಎರಡು ಅಂತಸ್ತಿನ ಮನೆಯ ಮೇಲೆ ಉಯ್ಯಾಲೆ ಆಡುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡಿದ್ದ ಶಿಕ್ಷಕಿ ಅವರು ಗುರುವಾರ ಮೃತಪಟ್ಟಿದ್ದಾರೆ.
ಇಲ್ಲಿನ ಜಿ.ಪಿ ಮಲ್ಲಪ್ಪ ಪುರಂ ಬಡಾವಣೆಯ ನಿವಾಸಿ ಶಿಕ್ಷಕಿ ಕೆ.ಪುಟ್ಟಿ (53) ಮೃತರು.ಇವರು ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು ಹಾಗೂ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿ ಸಂಘದ ತಾಲ್ಲೂಕು ಅಧ್ಯಕ್ಷರು ಆಗಿದ್ದರು.
ಇವರು ಮಂಗಳವಾರ ಸಂಜೆ ಮನೆಯ ಮೇಲೆ ಉಯ್ಯಾಲೆ ಆಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾರೆ.
ಬಿದ್ದ ತಕ್ಷಣ ಮನೆಯವರು ಅವರನ್ನು ಮೇಲೆತ್ತಿ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದರು. ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.