ಕಲಬುರಗಿ : ಕಲಬುರಗಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪಿಕಪ್ ಗೂಡ್ಸ್ ವಾಹನ- ಕಾರಿನ ನಡುವೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ.
ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಹೈದರಾಬಾದ್ ಮೂಲದ ಭಾರ್ಗವ್ ಕೃಷ್ಣ (56) ಸಂಗೀತ (45) ಉತ್ತಮ್ ರಾಘವನ್ (28) ಎಂದು ಗುರುತಿಸಲಾಗಿದೆ.ಹಾಗೂ ಮೃತಪಟ್ಟ ಕಾರು ಚಾಲಕನ ಹೆಸರು ತಿಳಿದು ಬಂದಿಲ್ಲ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.