ಬೆಂಗಳೂರು : ರಾಜಧಾನಿ ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆಟೋವೊಂದು ಬಿಎಂಟಿಸಿ ಬಸ್ ಗಳ ನಡುವೆ ಸಿಲುಕಿ ಅಪ್ಪಚಿಯಾಗಿರುವ ಘಟನೆ ನಡೆದಿದ್ದು, ಚಾಲಕ ಹಾಗೂ ಪ್ರಯಾಣಿಕ ಇಬ್ಬರು ಕೂಡ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಹನುಮಂತ ನಗರದ ಸೀತಾ ಸರ್ಕಲ್ ಬಳಿ ಎರಡು ಬಿಎಂಟಿಸಿ ಬಸ್ ನಡುವೆ ಆಟೋವೊಂದು ಸಿಲುಕಿ ಅಪ್ಪಚ್ಚಿಯಾಗಿದ್ದು, ಆಟೋದಲ್ಲಿದ್ದ ಚಾಲಕ ಹಾಗೂ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೂಡಲೇ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಆಟೋವನ್ನು ಹೊರತೆಗೆದು ಮೃತ ದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಅಪಘಾತದಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಂಚಾರಿ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ.
ಇನ್ನು ಇಂದು ಬೆಳ್ಳಂಬೆಳಗ್ಗೆಯಷ್ಟೇ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದರು.




