ಡಿಜಿಟಲ್ ಡೆಸ್ಕ್ : ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಬೇಟೆಯಾಡಿದ್ದು, 48 ಗಂಟೆಗಳಲ್ಲಿ ಒಟ್ಟು ಆರು ಉಗ್ರರ ಎನ್ ಕೌಂಟರ್ ಮಾಡಿದೆ.
ಮೇ 13 ರಂದು ಜಮ್ಮು-ಕಾಶ್ಮೀರದ ಶೋಫಿಯಾನದಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿತ್ತು. ಈ ಬೆನ್ನಲ್ಲೇ ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಮೂವರು ಉಗ್ರರನ್ನು ಹೊಡೆದುರುಳಿಸಿದೆ.
ಈ ಮೂಲಕ 48 ಗಂಟೆಗಳಲ್ಲಿ ಒಟ್ಟು ಆರು ಉಗ್ರರ ಎನ್ ಕೌಂಟರ್ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ನಾದಿ ಗ್ರಾಮದಲ್ಲಿ ಗುರುವಾರ ಮುಂಜಾನೆ ಭದ್ರತಾ ಪಡೆಗಳೊಂದಿಗೆ
ನಡೆದ ಗುಂಡಿನ ಚಕಮಕಿಯಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. 48 ಗಂಟೆಗಳ ಒಳಗೆ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ಎರಡನೇ ಎನ್‌ಕೌಂಟರ್ ಇದಾಗಿದೆ.