Ad imageAd image

ಬಿ ಎಂ ರಸ್ತೆಯಲ್ಲಿ ಭೀಕರ ಅಪಘಾತ ಖಾಸಗಿ ಬಸ್ ಅಡಿಗೆ ಸಿಲುಕಿದ ದ್ವಿಚಕ್ರ ವಾಹನ

Bharath Vaibhav
ಬಿ ಎಂ ರಸ್ತೆಯಲ್ಲಿ ಭೀಕರ ಅಪಘಾತ ಖಾಸಗಿ ಬಸ್ ಅಡಿಗೆ ಸಿಲುಕಿದ ದ್ವಿಚಕ್ರ ವಾಹನ
WhatsApp Group Join Now
Telegram Group Join Now

ಹಾಸನ: ನಗರದ ಪ್ರಮುಖ ರಸ್ತೆಯಾದ ಬಿ.ಎಂ. ರಸ್ತೆಯ ಮಲಬಾರ್ ಗೋಲ್ಡ್ ತಿರುವಿನ ಬಳಿ ಮಂಗಳವಾರ ಬೆಳಗಿನ ಜಾವ ಖಾಸಗಿ ಸ್ಲೀಪರ್ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀ*ಕರ ಅಪಘಾತದಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದಿನಾಂಕ 27 ಜನವರಿ 2026, ಮಂಗಳವಾರ ಬೆಳಗಿನ ಜಾವ ಸುಮಾರು 2:30ರ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಖಾಸಗಿ ಸ್ಲೀಪರ್ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನವು ಸಂಪೂರ್ಣವಾಗಿ ಬಸ್ಸಿನ ಅಡಿಗೆ ಸಿಲುಕಿಕೊಂಡಿದೆ.
ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಯುವಕರು ಅಪಘಾತದ ವೇಳೆ ಬಸ್ಸಿನ ಮುಂಭಾಗದಲ್ಲಿ ಸಿಲುಕಿಕೊಂಡಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ಸದ್ದು ಕೇಳುತ್ತಿದ್ದಂತೆ ಸ್ಥಳೀಯರು ಧಾವಿಸಿ ಬಂದು, ಬಸ್ಸಿನ ಅಡಿಯಲ್ಲಿ ಸಿಲುಕಿದ್ದ ಯುವಕರನ್ನು ರಕ್ಷಿಸಿ ತಕ್ಷಣವೇ ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಿನ ಜಾವವೇ ಸಂಭವಿಸಿದ ಈ ಘಟನೆಯಿಂದಾಗಿ ಬಿ.ಎಂ. ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯುಂಟಾಯಿತು. ರಸ್ತೆಯ ಮಧ್ಯದಲ್ಲೇ ಬಸ್ ನಿಂತಿದ್ದರಿಂದ ಹಾಗೂ ದ್ವಿಚಕ್ರ ವಾಹನ ಸಿಲುಕಿಕೊಂಡಿದ್ದರಿಂದ ಸಂಚಾರ ವ್ಯತ್ಯಯ ಉಂಟಾಗಿತ್ತು. ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.

ಈ ಭಾಗದಲ್ಲಿ ರಾತ್ರಿ ವೇಳೆ ವಾಹನಗಳ ವೇಗ ಹೆಚ್ಚಾಗಿರುವುದರಿಂದ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ವರದಿ: ರಾಜು ಅರಸೀಕೆರೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!