ಹುಬ್ಬಳ್ಳಿ : ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವ ಆರೋಪ ಕೇಳಿಬಂದಿದೆ. ಜೈಲಿನಲ್ಲಿ ಕೈದಿಗಳು ಆಗಿದೆ.
ಹುಬ್ಬಳ್ಳಿ ಕಾರಾಗೃಹದಲ್ಲಿ ಹಣ ಕೊಟ್ಟರೆ ಎಲ್ಲಾ ಸೌಲಭ್ಯಗಳು ಸಿಗುತ್ತವೆ.ವೈರಲ್ ಆಗಿರುವ ವಿಡಿಯೋದಲ್ಲಿ ವಿಚಾರಣಾಧೀನ ಕೈದಿಗಳು ಬಾಯ್ಸ್ ಹಾಸ್ಟೇಲ್ ನಲ್ಲಿರುವ ಹುಡುಗರಂತೆ ಆರಾಮವಾಗಿ ಕುಳಿತುಕೊಂಡು ಬೆಡ್ ಮೇಲೆ ಮಲೈ ಮಾತುಕತೆಯಲ್ಲಿ ತೊಡಗಿದ್ದಾರೆ.
ಜೈಲಿನ ಸೆಲ್ ರೂಮಿನಂತೆ ಭಾಸವಾಗುತ್ತಿದೆ. ಅಡುಗೆ ಮಾಡಿಕೊಳ್ಳಲು ವ್ಯವಸ್ಥೆ, ಬಟ್ಟಲ ತುಂಬ ಮೊಟ್ಟೆ, ಪಕ್ಕದಲ್ಲಿಯೇ ಮದ್ಯ, ಗಾಂಜಾ, ಮೊಬೈಲ್ ಫೋನ್ ಬಳಸುತ್ತಿರುವ ದೃಶ್ಯ, ಸೆಲ್ಫಿ ತೆಗೆದುಕೊಳ್ಳುತ್ತ ಮಜವಾಗಿ ಕೈದಿಗಳು ಕಾಲ ಕಳೆಯುತ್ತಿದ್ದಾರೆ.
ಗಾಂಜಾ ಹಾಗೂ ಮದ್ಯ ಸೇವನೆ ಮಾಡುತ್ತ, ರಾಜಾತಿಥ್ಯ ಪಡೆದು ಕೈದಿಗಳು ಜೈಲಿನಲ್ಲೇ ಬಿಂದಾಸ್ ಜೀವನ ನಡೆಸುತ್ತಿದ್ದಾರೆ. ಹುಬ್ಬಳ್ಳಿ ಉಪಕಾರಾಗೃಹದ ದೃಶ್ಯ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ.
ಕೈದಿಗಳಿಗೆ ಜೈಲಿನಲ್ಲಿ ಯಾಅವುದೇ ಭಯವಿಲ್ಲದೇ ರಾಜಾರೋಷವಾಗಿ ಆರಾಮವಾಗಿ ಕಾಲಕಳೆಯುತ್ತಿದ್ದಾರೆ. ಈ ಉಪ ಕಾರಾಗೃಹದಲ್ಲಿ ಕಳೆದ ವರ್ಷ ನವೆಂಬರ್ 13ರಂದು ನಡೆದಿದ್ದ ಮಲ್ಲಿಕ್ ಕೊಲೆ ಪ್ರಕರಣದ ಆರೋಪಿಗಳು ಸೇರಿದಂತೆ ಅನೇಕ ಗಂಭೀರ ಪ್ರಕರಣಗಳಲ್ಲಿ ಶಾಮೀಲಾದ ಆರೋಪಿಗಳು ಇದ್ದಾರೆ. ಬೆಂಡಿಗೇರಿ ಠಾಣೆ ಪೊಲೀಸರು ಈ ಪ್ರಕರಣ ಸಂಬಂಧ 17 ಜನರನ್ನು ಬಂಧಿಸಿದ್ದರು. ವೈರಲ್ ವಿಡಿಯೋದಲ್ಲಿ ಅಭಿಷೇಕ್ ಜಾಧವ್, ಗಣೇಶ್ ಜಾಧವ್ ಸೇರಿದಂತೆ ಕೆಲ ಆರೋಪಿಗಳು ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.
ಹುಬ್ಬಳ್ಳಿಯ ಉಪಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ, ಮದ್ಯ, ಗಾಂಜಾ ಪತ್ತೆ ವಿಡಿಯೋ ವೈರಲ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್, ಜೈಲಾಧಿಕಾರಿಗಳಿಗೆ ವರದಿ ಕೇಳಿದ್ದಾರೆ.
ಜೈಲಿನೊಳಗೆ ಗಾಂಜಾ, ಮದ್ಯ, ಮೊಬೈಲ್‌ಗಳ ಪೂರೈಕೆ ಹೇಗೆ ಸಾಧ್ಯ? ಈ ಬಗ್ಗೆ ತನಿಖೆ ಆರಂಭಿಸಿರುವ ಅಧಿಕರಿಗಳು ವಿಡಿಯೋ ನೈಜತೆಯ ಪರಿಶೀಲನೆ ನಡೆಸುತ್ತಿದ್ದಾರೆ.




