ಮಂಡ್ಯ : ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ಪತಿ ನಡೆಸುತ್ತಿದ್ದ ಜಿಮ್‌ನಲ್ಲಿಯೇ ಮಹಿಳೆ ನೇಣಿಗೆ ಶರಣಾಗಿದ್ದಾರೆ. ದಿವ್ಯಾ (27) ಮೃತ ಮಹಿಳೆ.
ಈಕೆಯ ಪತಿ ಗಿರೀಶ್, ವೈಭವ ಹೆಸರಿನ ಜಿಮ್ ನಡೆಸುತ್ತಿದ್ದ. ಆದರೆ ಆತನಿಗೆ ಬೇರೊಬ್ಬರ ಜತೆ ಅನೈತಿಕ ಸಂಬಂಧ ಹೊಂದಿದ್ದ ಶಂಕೆ ಪತ್ನಿಗೆ ಇತ್ತು. ಹೀಗಾಗಿ ಮನನೊಂದು ದಿವ್ಯಾ ಪತಿಯ ಜಿಮ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆದರೆ, ಮಗಳನ್ನು ಅಳಿಯನೇ ಹೊಡೆದು ಕೊಂದಿರುವುದಾಗಿ ದಿವ್ಯಾ ಕುಟುಂಬಸ್ಥರು ಆರೋಪಿಸಿದ್ದು, ಜಿಮ್‌ನಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ಬಗ್ಗೆ ಕುಟುಂಬಸ್ಥರು, ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿ ಜಿಮ್‌ನಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿ ಸಂಬಂಧಿಕರನ್ನು ಸಮಾಧಾನಪಡಿಸಿ ಹೊರಗೆ ಕಳುಹಿಸಿದ್ದಾರೆ.