Ad imageAd image

ಗೃಹಲಕ್ಷ್ಮೀ ಯೋಜನೆಯಿಂದ ಗ್ರಂಥಾಲಯ ನಿರ್ಮಿಸಿದ ಮಹಿಳೆ 

Bharath Vaibhav
ಗೃಹಲಕ್ಷ್ಮೀ ಯೋಜನೆಯಿಂದ ಗ್ರಂಥಾಲಯ ನಿರ್ಮಿಸಿದ ಮಹಿಳೆ 
WhatsApp Group Join Now
Telegram Group Join Now

ರಾಯಭಾಗ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಗೃಹಲಕ್ಷ್ಮೀ ಯೋಜನೆ ಸಾವಿರಾರು ಮಹಿಳೆಯರ ಬದುಕಿಗೆ ದಾರಿ ದೀಪವಾಗಿದೆ.

ಗೃಹಲಕ್ಷ್ಮೀ ಯೋಜನೆಯ ಹಣದಿಂದ ಟಿವಿ, ಫ್ರಿಡ್ಜ್ ಖರೀದಿಸಿದವರು ಒಂದೆಡೆ ಆದ್ರೇ, ಇಡೀ ಊರಿಗೆ ಹೋಗಿಗೆ ಊಟ ಹಾಕಿಸಿದಂತ ತಾಯಿ ಮತ್ತೊಂದೆಡೆ.ಈ ನಡುವೆ ತನ್ನ ಗ್ರಾಮ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಸಹಾಯವಾಗಲೆಂದು ಇಲ್ಲೊಬ್ಬ ಯಜಮಾನಿ ಗ್ರಂಥಾಲಯವನ್ನೇ ನಿರ್ಮಿಸಿದ್ದಾರೆ.

ಹೌದು ರಾಯಭಾಗ ತಾಲ್ಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಎಂಬುವರು ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವಂತ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗ್ರಂಥಾಲಯವನ್ನೇ ನಿರ್ಮಿಸಿದ್ದಾರೆ.

ರಾಯಭಾಗ ತಾಲ್ಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿಯ ಈ ಕಾರ್ಯವನ್ನು ಗ್ರಾಮಸ್ಥರು ಹಾಡಿ ಹೊಗಳಿಸಿದ್ದಾರೆ. ವಿದ್ಯಾರ್ಥಿಗಳಂತೂ ಮನಮೆಚ್ಚಿ ಮಲ್ಲವ್ವನನ್ನು ಕೊಂಡಾಡಿದ್ದಾರೆ.

ಒಟ್ಟಾರೆಯಾಗಿ ಮಲ್ಲವ್ವ ನನ್ನಗೆ ಬಂದ ಗೃಹಲಕ್ಷ್ಮಿ ಹಣದಿಂದ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಿಸಿದ್ದೇನೆ. ಇದರ ಸದುಪಯೋಗ ವಿದ್ಯಾರ್ಥಿಗಳಿಗೆ ಆಗಲಿ ಎಂಬುದಾಗಿ ಮನವಿ ಮಾಡಿದ್ದಾರೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!