ಪತಿ ಅಗಲಿಕೆ ನೋವಿನಲ್ಲಿಯೂ ಮತಚಲಾಯಿಸಿ ಕರ್ತವ್ಯ ಪ್ರಜ್ಞೆ ಮೆರೆದ ಮಹಿಳೆ 

Bharath Vaibhav
ಪತಿ ಅಗಲಿಕೆ ನೋವಿನಲ್ಲಿಯೂ ಮತಚಲಾಯಿಸಿ ಕರ್ತವ್ಯ ಪ್ರಜ್ಞೆ ಮೆರೆದ ಮಹಿಳೆ 
WhatsApp Group Join Now
Telegram Group Join Now

ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2ನೇ ಹಂತದ ಮತದಾನ ಬಿರುಸಿನಿಂದ ಸಾಗಿದೆ. ಮತದಾರರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ನಡುವೆ ಮಹಿಳೆಯೊಬ್ಬರು ತನ್ನ ಪತಿ ಅಗಲಿಕೆ ನೋವಿನಲ್ಲಿಯೂ ಮತಚಲಾಯಿಸುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡುಗೋಡಿನ ಕಲಾವತಿ ವೆಂಕಟೇಶ್ ಅವರ ಪತಿ ವೆಂಕಟೇಶ್ ಅನಾರೋಗ್ಯದಿಂದ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ (ಮೇ 7 ಮಂಗಳವಾರ) ಮೃತಪಟ್ಟಿದ್ದಾರೆ.ಪತಿ ಮರಣದ ಸುದ್ದಿಯಿಂದ ಆಘಾತದಲ್ಲಿದ್ದರೂ ಮಹಿಳೆ ಕಲಾವತಿ ಪತಿಯ ಖುಷಿಗಾಗಿ ತಾನು ವೋಟು ಹಾಕಲೇಬೇಕು ಎಂದು ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!