ರಾಯಚೂರು : ಹೊರವಲಯದ ಯರಮರಸ್ ಬಳಿಯಿರುವ ನಿರ್ಜನ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಅತ್ಯಾಚಾರವೆಸಗಿ ಬಳಿಕ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ.
ಸುಮಾರು 28-30 ವರ್ಷದ ಆಸುಪಾಸಿನ ಮಹಿಳೆ ಅರೆಬೆತ್ತಲೆ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 3-4 ದಿನಗಳ ಹಿಂದೆಯೇ ಘಟನೆ ನಡೆದಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ರಾಯಚೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.