ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 3 ವರ್ಷದ ಬಾಲಕಿ ಮೇಲೆ ಶಿಕ್ಷಕಿಯೇ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ.
ವೆಂಕಟೇಶ್ವರ ಪುರದ ಅನ್ವರ್ ಲೇಔಟ್ ನ ಖಾಸಗಿ ಶಾಲೆಯಲ್ಲಿ ನರ್ಸರಿ ಓದುತ್ತಿದ್ದ 3 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂದು ಹೇಳಲಾಗಿದೆ. ಶಾಲೆಯ ಶಿಕ್ಷಕಿಯೊಬ್ಬಳು ಇಂತಹ ಹೇಯ ಕೃತ್ಯ ಎಸಗಿದ್ದಾಳೆ.
ದೇಹದ ಖಾಸಗಿ ಭಾಗದಲ್ಲಿ ರಕ್ತಸ್ರಾವವಾಗಿ ಮಗು ನಡೆಯಲು ಆಗದೆ ಕಷ್ಟಪಡುತ್ತಿತ್ತು. ಅಲ್ಲದೇ ಶಾಲೆಗೆ ಹೋಗಲು ಹಠ ಹಿಡಿದು ಅಳುತ್ತಿತ್ತು, ಇದನ್ನು ಗಮನಿಸಿದ ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಧೃಡವಾಗಿದೆ. ಪೋಷಕರು ಕೆಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.