ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ 1 ರ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನ ರಾಮನಗರ, ಚಾಮರಾಜನಗರ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ 6ರಿಂದ 11 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ನವೆಂಬರ್ 2 ರ ನಾಳೆ ರಾಮನಗರ, ಮಂಡ್ಯ, ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ನವೆಂಬರ್ 3ರಂದು ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.