Join The Telegram | Join The WhatsApp |
ಧಾರವಾಡ: 26ನೇ ರಾಷ್ಟ್ರೀಯ ಯುವ ಜನೋತ್ಸವದಲ್ಲಿ ತಮ್ಮ ರಾಜ್ಯವನ್ನು ಪ್ರತಿನಿಧಿಸಲು ಬಂದಿದ್ದ ಯುವೊನೊಬ್ಬನಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದು, ಯುವಕನನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಧಾರವಾಡದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಜಮ್ಮು ಕಾಶ್ಮೀರದಿಂದ ಬಂದಿದ್ದ ಸದಿನ್ ಎಂಬ ಯುವಕನಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಸಹ ಪ್ರತಿನಿಧಿಗಳು ಸ್ಥಳೀಯ ಅಧಿಕಾರಿಗಳಿಗೆ ಯುವಕನ ಸಮಸ್ಯೆ ತಿಳಿಸಿದ್ದಾರೆ. ತಕ್ಷಣವೇ ಅಲರ್ಟ್ ಆದ ಅಧಿಕಾರಿಗಳು ಯುವಕನನ್ನು ಈಗ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಇನ್ನೂ ಜಮ್ಮು ಕಾಶ್ಮೀರದ ಸದಿನ್ ಯುವಕನಿಗೆ ಧಾರವಾಡ ಕೃಷಿ ವಿಶ್ವ ವಿದ್ಯಾಲಯದಲ್ಲಿ ಜಿಲ್ಲಾಡಳಿತ ವತಿಯಿಂದ ವಸತಿ ಕಲ್ಪಿಸಲಾಗಿದ್ದು, ಸದ್ಯ ಯುವಕನಿಗೆ ಜಿಲ್ಲಾ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ವರದಿ:ವಿನಾಯಕ ಏನ್ ಗುಡ್ಡದಕೇರಿ
Join The Telegram | Join The WhatsApp |