ಉತ್ತರ ಪ್ರದೇಶ : ಮದುವೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಯುವತಿಯೊಬ್ಬಳು ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿ, ಆಕೆ ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಲ್ಲಿ ನಡೆದಿದೆ.
ಪೊಲೀಸರ ವರದಿಯ ಪ್ರಕಾರ, ಕಳೆದ 8 ವರ್ಷಗಳಿಂದ ಆರೋಪಿ ಮಹಿಳೆ ಹಾಗೂ ಗಾಯಾಳು ಯುವಕ ಸಂಬಂಧವನ್ನು ಇಟ್ಟುಕೊಂಡಿದ್ದರು, ಅಲ್ಲದೇ ನಿನ್ನನ್ನೇ ಮದುವೆಯಾಗುವುದಾಗಿ ಕೂಡ ನಂಬಿಸಿದ್ದ..
ಆದರೆ ಇದೀಗ ದಿಢೀರ್ ಆಗಿ ನನಗೆ ಬೇರೆಯವರೊಂದಿಗೆ ಮದುವೆ ಫಿಕ್ಸ್ ಆಗಿದೆ ಎಂದು ಯುವಕ ಹೇಳಿದ್ದು, ಇದರಿಂದ ಸಿಟ್ಟಾದ ಯುವತಿ ಯುವಕನೊಂದಿಗೆ ಗಲಾಟೆಯಾಡಿದ್ದಾಳೆ. ಇಷ್ಟೇ ಅಲ್ಲದೇ ನನ್ನನು ಮದುವೆಯಾಗಿಲ್ಲ ಎಂದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಳು.
ಈ ವಿಚಾರಕ್ಕೆ ಕೂಡ ಇಬ್ಬರ ನಡುವೆ ಮತ್ತೆ ಗಲಾಟೆಯಾಗಿದೆ. ಈ ವೇಳೆ ಯುವಕ ನಾನು ನಿನ್ನನ್ನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾನೆ. ಈ ವೇಳೆ ಕೋಪಗೊಂಡ ಯುವತಿ, ಯುವಕನನ್ನು ಭೇಟಿಯಾಗುವಂತೆ ತಿಳಿಸಿದ್ದಾಳೆ.
ಅದರಂತೆ ಭೇಟಿಯಾಗಲು ಬಂದಾಗ ಚೂಪಾದ ಆಯುಧದಿಂದ ಆತನ ಮೇಲೆ ಹಲ್ಲೆ ನಡೆಸಿ, ಖಾಸಗಿ ಅಂಗವನ್ನೆ ಕತ್ತರಿಸಿದ್ದಾಳೆ. ಅಷ್ಟೇ ಅಲ್ಲದೆ ಆಕೆಯ ಮಣಿಕಟ್ಟನು ಕತ್ತರಿಸಿಕೊಂಡಿದ್ದಾರೆ. ಇದನ್ನು ಗಮನಿಸಿದ ಯುವಕ ರಕ್ತದ ಮಡುವಿನಲ್ಲಿದ್ದರೂ ಕೂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ.
ಸದ್ಯ ಆಸ್ಪತ್ರೆಯಲ್ಲಿ ಇಬ್ಬರು ಕೂಡ ಚಿಕಿತ್ಸೆ ಪಡೆಯುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಾಗಿದೆ. ಅಲ್ಲದೇ ಯುವತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.