ಬೆಳಗಾವಿ: ಎಲೆಕ್ಟ್ರಿಕ್ ಸ್ಕೂಟಿ ಹಾಗೂ ಕಬ್ಬು ತುಂಬಿದ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಬಳಿ ಈ ದುರಂತ ಸಂಭವಿಸಿದೆ.ವಡೇರಹಟ್ಟಿ ನಿವಾಸಿ ಅನಿತಾ ಡೂಗನವರ (26) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಮಹಿಳೆ ಅನಿತಾ ತನ್ನ ಗಂಡನ ಜೊತೆ ಲೋಳಸೂರ ಬಸ್ ನಿಲ್ದಾಣಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಕಬ್ಬು ತುಂಬಿದ ಟ್ರ್ಯಾಕ್ಟರ್ ಸ್ಕೂಟಿಗೆ ಡಿಕ್ಕಿ ಹೋಡೆದಿದೆ. ಅಪಘಾತದಲ್ಲಿ ಕೆಳಗೆ ಬಿದ್ದ ಅನಿತಾ ಗಂಭೀರವಾಗಿ ಗಾಯಗೊಮ್ಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.




