ಕಳೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಾಜಕೀಯ ವಿಶ್ಲೇಷಕ ಮತ್ತು ಸ್ವರಾಜ್ ಇಂಡಿಯಾ ನಾಯಕ ಯೋಗೇಂದ್ರ ಯಾದವ್ ಬಹಿರಂಗ ಬೆಂಬಲ ನೀಡಿದ್ದಾರೆ.
ರಾಹುಲ್ ಗಾಂಧಿ ಬಿಡುಗಡೆ ಮಾಡಿದ ದತ್ತಾಂಶವು ಚುನಾವಣಾ ಆಯೋಗದ ಮೇಲಿನ ಸಾರ್ವಜನಿಕ ನಂಬಿಕೆಯನ್ನು ಕಳೆದುಕೊಳ್ಳಬಹುದು ಎಂದು ಯೋಗೇಂದ್ರ ಯಾದವ್ ಎಚ್ಚರಿಸಿದ್ದಾರೆ.
ಚುನಾವಣಾ ಆಯೋಗ ವಿರುದ್ಧ ರಾಹುಲ್ ಗಾಂಧಿ ಆರೋಪದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿದ ಯೋಗೇಂದ್ರ ಯಾದವ್, ದಶಕಗಳಿಂದ ಭಾರತದ ಚುನಾವಣಾ ಪ್ರಕ್ರಿಯೆ ಮತ್ತು ಚುನಾವಣಾ ಆಯೋಗದ ಸಮಗ್ರತೆಯನ್ನು ನಾನು ಸಮರ್ಥಿಸಿಕೊಂಡಿದ್ದೇನೆ. ಆದರೆ ಈ ಪುರಾವೆಗಳು ಈಗ ಗಂಭೀರ ಪರೀಕ್ಷೆಯನ್ನು ಬಯಸುತ್ತಿವೆ ಎಂದಿದ್ದಾರೆ.




