ಲಿಂಗಸುಗೂರು : ಹಟ್ಟಿ ಚಿನ್ನದ ಗಣಿ ಕಂಪನಿ ಆಯೋಜಿಸಿದ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕರಿಗಾಗಿ 998 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ವಸತಿ ಸಮುಚ್ಚಯ ನಿರ್ಮಾಣ, ಮಲ್ಟಿ ಸ್ಪೆಷಲಿಟಿ ಆಸ್ಪತ್ರೆ, ಕ್ರೀಡಾಂಗಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆಗಾಗಿ ಲಿಂಗಸುಗೂರು ತಾಲೂಕಿನ ಶಾಸಕರಾದ ಮಾನಪ್ಪ ವಜ್ಜಲ್ ಅಧ್ಯಕ್ಷತೆಯಲ್ಲಿ ದಾರುವಾಲಾ ಕ್ರೀಡಾಂಗಣದಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಭವ್ಯ ವೇದಿಕೆ ಸಿದ್ಧಗೊಂಡಿತ್ತು ಈ ಕಾರ್ಯಕ್ರಮಕ್ಕಾಗಿ ಜಿಲ್ಲಾ ಆಡಳಿತವು ಹಲವಾರು ಸಭೆಗಳನ್ನು ನಡೆಸಿ ರಾಜ್ಯದ ಮುಖ್ಯಮಂತ್ರಿ ಆಗಮಿಸುತ್ತಿರುವ ಹಿನ್ನೆಲೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮತ್ತು ಸಿಎಂ ಬರವಿಗಾಗಿ ಎರಡು ಸಾವಿರ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು
ಹಟ್ಟಿ ಚಿನ್ನದ ಕಂಪನಿಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಕಂಪನಿ ಅಧಿಕಾರಿಗಳೊಂದಿಗೆ ಹಲವಾರು ಸಭೆಗಳನ್ನು ನಡೆಸಿ ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಯಾವುದೇ ರೀತಿಯ ತೊಂದರೆಯಾಗದೆ ಹಾಗೆ ಊಟದ ವ್ಯವಸ್ಥೆಯು ಮಾಡಲಾಗಿತ್ತು ಹಟ್ಟಿ ಪಟ್ಟಣದ ಕಾಂಗ್ರೆಸ್ ಮುಖಂಡರು ಮತ್ತು ಮಾಜಿ ಶಾಸಕರು ಸೇರಿಕೊಂಡು ಸಿಎಂ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರದಿಂದ ಕಾಂಗ್ರೆಸ್ ಕಾರ್ಯಕರ್ತರು ಕಾತುರದಿಂದ ಕಾಯುತ್ತಿದ್ದರು.
ಮುಖ್ಯಮಂತ್ರಿಗಳ ಆಗಮನಕ್ಕಾಗಿ ಹಲವಾರು ಜನ ಕಾರ್ಯಕರ್ತರು ದಾರುವಾಲ ಕ್ರೀಡಾಂಗಣ ಹತ್ತಿರ ಮತ್ತು ಕೇಂದ್ರೀಯ ವಿದ್ಯಾಲಯದ ಮುಖ್ಯರಸ್ತೆಯ ಪಕ್ಕದಲ್ಲಿ ದೊಡ್ಡ ದೊಡ್ಡ ಬ್ಯಾನರ್ ಗಳನ್ನು ಅಳವಡಿಸಿದ್ದರು ಇನ್ನೇನು ಬೆಳಗಾದರೆ ಸಾಕು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಆಗಮಿಸುತ್ತಾರೆ ಎಂದು ಸಕಲ ಸಿದ್ಧತೆಯೊಂದಿಗೆ ಕಾಯುತ್ತಿರುವಾಗ ರಾತ್ರಿ 10:00 ಸುಮಾರಿಗೆ ಕರ್ನಾಟಕ ಸರ್ಕಾರದ ಕೆ ಚಿರಂಜೀವಿ ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯ ಧಿಕಾರಿ ಹಾಗೂ ಪದನಿಮಿತ್ತ ಸರಕಾರ ವಿಶೇಷ ಕಾರ್ಯದರ್ಶಿ ಇವರಿಂದ ಶ್ರೀ ಸಿದ್ದರಾಮಯ್ಯ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಇವರು ಬುಧವಾರ ದಿನಾಂಕ 6 ರಂದು ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕೈಗೊಳ್ಳಲಿರುವ ಪ್ರವಾಸ ಕಾರ್ಯಕ್ರಮವನ್ನು ಹವಮಾನದ ವೈಪರೀತ್ಯಗಳ ಕಾರಣ ರದ್ದುಪಡಿಸುತ್ತಾರೆಂದು ಪತ್ರ ರವಾನಿಸಿದ್ದರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಾರೆಂದು ನಿರೀಕ್ಷೆ ಇಟ್ಟುಕೊಂಡ ಕಾರ್ಮಿಕರಿಗೂ ಮತ್ತು ಅಧಿಕಾರಿಗಳಿಗೂ ಮತ್ತು ಕಾಂಗ್ರೆಸ್ ಮುಖಂಡರಿಗೂ ಅಭಿಮಾನಿಗಳಿಗೂ ನಿರಾಸೆ ಮೂಡಿತು
ಚಿನ್ನದ ಗಣಿಯ ಕಾರ್ಮಿಕರ ಕೋಟ್ಯಾಂತರ ರೂಪಾಯಿ ಹಣ ಮಳೆ ನೀರಿನಲ್ಲಿ ಹೋಮ ಮಾಡಿದ ಹಾಗೆ ಆಗಿದೆ, ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕು ಸ್ಥಾಪನೆಗೆ ಸನ್ಮಾನ್ಯ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಮಿಸುತ್ತಿರುವ ಹಿನ್ನೆಲೆ ಕೋಟ್ಯಾಂತರ ರೂಪಾಯಿ ಹಣ ಖರ್ಚು ಭವ್ಯವಾದ ವೇದಿಕೆ ಸಿದ್ಧಗೊಳಿಸಿದ್ದು,ಮುಖ್ಯಮಂತ್ರಿಗಳ ಕಾರ್ಯಕ್ರಮ ರದ್ದಾದರಿನಂತೆ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ವೇದಿಕೆ ಸಿದ್ಧಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಂಸದ ಮತ್ತು ಸಚಿವರು, ಸ್ಥಳೀಯ ಶಾಸಕರು ಸೇರಿದಂತೆ ಕಂಪನಿ ಅಧಿಕಾರಿಗಳೊಂದಿಗೆ ಈ ಕಾರ್ಯಕ್ರಮ ನಡೆಸಬಹುದಾಗಿತ್ತು ಎಂದು ಸ್ಥಳೀಯ ಸಾರ್ವಜನಿಕರ ಅಭಿಪ್ರಾಯವಾಗಿದೆ ಇದಕ್ಕೆ ಹಟ್ಟಿ ಚಿನ್ನದ ಗಣಿ ಕಂಪನಿಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಏಕಏಕಿ ಕಾರ್ಯಕ್ರಮದ ವೇದಿಕೆಯನ್ನು ತೆರೆವುಗೊಳಿಸಿದ್ದು ಏಕೆ ಅನ್ನುವ ಪ್ರಶ್ನೆ ಸಾರ್ವಜನಿಕರು ಮತ್ತು ಕಾರ್ಮಿಕರದಾಗಿದೆ.
ವರದಿ : ಶ್ರೀನಿವಾಸ ಮಧುಶ್ರೀ




