Ad imageAd image

ಜಮೀನು ಅಕ್ರಮ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಆರ್‌ ಟಿಸಿ ಗೆ ಆಧಾರ್‌ ಜೋಡಣೆ ಕಡ್ಡಾಯ

Bharath Vaibhav
WhatsApp Group Join Now
Telegram Group Join Now

ಬೆಳಗಾವಿ : ಜಮೀನು ಅಕ್ರಮ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಆರ್‌ ಟಿಸಿ ಗೆ ಆಧಾರ್‌ ಜೋಡಣೆ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಕೃಷ್ಣಬೈರೇಗೌಡ, ರಾಜ್ಯದಲ್ಲಿ ೪ ಕೋಟಿ ಜಮೀನು ಮಾಲೀಕರಿದ್ದಾರೆ.ಈ ಪೈಕಿ ಈಗಾಗಲೇ ೧.೪೮ ಕೋಟಿ ಮಾಲೀಕರ ಜಮೀನುಗಳಿಗೆ ಆಧಾರ್‌ ಜೋಡಣೆ ಮಾಡುವುದಕ್ಕೆ ಅಧಿಕಾರಿಗಳಿಗೆ ಗಡುವು ನೀಡಲಾಗಿದೆ. ಆರ್‌ ಟಿಸಿಗಳಿಗೆ ಆಧಾರ್‌ ಜೋಡಣೆ ಮಾಡುವುದರಿಂದ ನಕಲಿ ದಾಖಲೆ ಸೃಷ್ಟಿಸಿ ಒಬ್ಬರ ಜಮೀನು ಮತ್ತೊಬ್ಬರು ಲಪಟಾಯಿಸಲು ಬರುವುದಿಲ್ಲ ಮತ್ತು ಯಾವುದೇ ವ್ಯವಹಾರ ಮಾಡುವುದಕ್ಕೆ ಸರಳೀಕರಣವಾಗಲಿದೆ ಎಂದು ತಿಳಿಸಿದ್ದಾರೆ.

ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಲಕ್ಷಾಂತರ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅರ್ಹರಿಗೆ ಮಾತ್ರ ಜಮೀನು ಮಂಜೂರು ಮಾಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಅವರು, “ಈ ಹಿಂದೆ ಬಗರ್ ಹುಕುಂ ಸಾಗುವಳಿ ಚೀಟಿ ನೀಡುವ ವೇಳೆ ಅನರ್ಹರಿಗೂ ಜಮೀನು ಮಂಜೂರು ಮಾಡಲಾಗಿದೆ. ನಿಯಮ ಮೀರಿ ಸಾಕಷ್ಟು ಅಕ್ರಮ ನಡೆಸಲಾಗಿದೆ. ಆದರೆ ಈ ಬಾರಿ ಅಂತಹ ಯಾವುದೇ ಪ್ರಹಸನಗಳಿಗೆ ಆಸ್ಪದ ಇಲ್ಲ. ಬಗರ್ ಹುಕುಂ ಸಭೆಯ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿ ಪಡೆಯಬೇಕು” ಎಂದು ತಾಕೀತು ಮಾಡಿದರು.

ಬಗರ್ ಹುಕುಂ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ಪ್ರಭಾವಿಗಳ ಅಥವಾ ರಾಜಕೀಯ ಪಕ್ಷದ ನಾಯಕರಿಗೆ ಅನುಕೂಲವಾಗುವಂತೆ ವರ್ತಿಸಬಾರದು, ಬದಲಾಗಿ ಬಡ ಜನರಿಗೆ ಮತ್ತು ಅರ್ಹರಿಗೆ ನ್ಯಾಯ ಒದಗಿಸಲು ಬದ್ಧರಾಗಿರಬೇಕು. ಮುಂದಿನ 6 ತಿಂಗಳಲ್ಲಿ ಅರ್ಹರಿಗೆ ಸಾಗುವಳಿ ಚೀಟಿ ನೀಡಬೇಕು,ಸಾಗುವಳಿ ಚೀಟಿ ನೀಡುತ್ತಿದ್ದಂತೆ ಹೊಸ ಸರ್ವೇ ನಂಬರ್ ಪೋಡಿಯನ್ನೂ ಸಹ ಒದಗಿಸಬೇಕು ಎಂದರು.

 

WhatsApp Group Join Now
Telegram Group Join Now
Share This Article
error: Content is protected !!