Ad imageAd image

ನೈರ್ಮಲ್ಯ ಉಪ ವಿಭಾಗ ಅಧಿಕಾರಿಗಳಿಂದ ಅಧಿಕಾರ ದುರುಪಯೋಗ

Bharath Vaibhav
ನೈರ್ಮಲ್ಯ ಉಪ ವಿಭಾಗ ಅಧಿಕಾರಿಗಳಿಂದ ಅಧಿಕಾರ ದುರುಪಯೋಗ
WhatsApp Group Join Now
Telegram Group Join Now

ಸಿಂಧನೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಸಿಂಧನೂರಿನ ಕಿರಿಯ ಅಭಿಯಂತರಾದ ನಾಗರಾಜ್ ಪ್ರಭಾ ಯಾವುದೇ ಲಿಖಿತ ಆದೇಶವಿಲ್ಲದೆ ಸರ್ಕಾರಿ ಕಾರ್ಯಪಾಲಕ ಅಭಿಯಂತರ ಹುದ್ದೆಯ ಅಧಿಕಾರ ಚಲಾಯಿಸಿ ಅಧಿಕಾರ ದುರ್ಬಳಕೆ ಹಾಗೂ ಆರ್ಥಿಕ ಅವ್ಯವಹಾರ ಪ್ರಕರಣದ ಕುರಿತು ಸಲ್ಲಿಸಲಾದ ದೂರುಗಳ ಬಗ್ಗೆ ಸೇವಾ ನಿಯಮಾನುಸಾರ ವರದಿ ಮಾಡದೆ ನಿರ್ಲಕ್ಷ್ಯ ತೋರಿರುವ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಡಿ. ವಿಜಯಲಕ್ಷ್ಮೀ ಅವರ ವಿರುದ್ಧ ಗಂಭೀರ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಲಾಯಿತು.

ನಗರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಕಛೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವಿಷಯದ ಕುರಿತು ಸಮಗ್ರ ತನಿಖೆ ನಡೆಸಿ, ಎಲ್ಲಾ ದಾಖಲೆಗಳನ್ನು ಪರಿಶೀಲಿಸಲು ಆದೇಶಿಸಬೇಕು. ಕಿರಿಯ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಸಂಬಂಧಪಟ್ಟ ಎಲ್ಲರ ಮೇಲೂ ಸಾಮೂಹಿಕ ಜವಾಬ್ದಾರಿ ನಿಗದಿಪಡಿಸಬೇಕು. ಡಿ. ವಿಜಯಲಕ್ಷ್ಮೀ ಹಾಗೂ ಶ್ರೀ ಪ್ರಕಾಶ ಅವರ ವಿರುದ್ಧ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಸಿಸಿಎ, ನಿಯಮಗಳಡಿ ಶಿಸ್ತು ಕ್ರಮ ಪ್ರಾರಂಭಿಸಬೇಕು ನಾಗರಾಜ ಪ್ರಭಾ ಅವರ ವಿರುದ್ಧ ಆರ್ಥಿಕ ಅವ್ಯವಹಾರ ಮತ್ತು ದಾಖಲೆ ಕೃತಕತೆ ಕುರಿತು ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣವನ್ನು ಲೋಕಾಯುಕ್ತ/ಉಪಲೋಕಾಯುಕ್ತ ತನಿಖೆಗೆ ಒಪ್ಪಿಸಬೇಕು.ಆರ್ಥಿಕ ನಷ್ಟವಿದ್ದಲ್ಲಿ ವಸೂಲಿ ಕ್ರಮ ಕೈಗೊಳ್ಳಬೇಕು.ಸಂಬಂಧಪಟ್ಟ ಅಧಿಕಾರಿಗಳನ್ನು ತಕ್ಷಣ ಅಮಾನತು/ಸ್ಥಳಾಂತರ ಮಾಡಬೇಕೆಂದು ತಹಶಿಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಚನ್ನಬಸವ ಅಮಿನಗಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಾಧಿಕ್ ಮೇಸ್ತ್ರಿ , ತಾಲೂಕು ಗೌರವಧ್ಯಕ್ಷ ಯಮನಪ್ಪ, ತಾಲೂಕು ಅಧ್ಯಕ್ಷ ವಿರುಪಾಕ್ಷಿ ಸಾಸಲಮರಿ, ಉಪಾಧ್ಯಕ್ಷ ಶರೀಫ್ ಸೇರಿದಂತೆ ಅನೇಕರು ಇದ್ದರು.

ವರದಿ : ಬಸವರಾಜ ಬುಕ್ಕನಹಟ್ಟಿ. 

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!