ಭಾಲ್ಕಿ :ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಭಾಲ್ಕಿ ಘಟಕ ವತಿಯಿಂದ ನಗರದ ಅಂಬೇಡ್ಕರ ವೃತ್ತದಿಂದ ತಹಶೀಲ್ದಾರ ಕಚೇರಿವರೆಗೆ ಭಯೋತ್ಪಾದಕರ ದಾಳಿಯನ್ನು ತೀವ್ರವಾಗಿ ಖಂಡಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು.
ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂಬುದು ಸಾರ್ವಕಾಲಿಕ ಸತ್ಯ. ಅಲ್ಲಿನ ಪ್ರತ್ಯೇಕವಾದದ ಮನಸ್ಥಿತಿಯನ್ನು ಬದಲಾಯಿಸಲು ಹಾಗೂ ಜನ-ಜೀವನ ಸ್ಥಿತಿಗತಿಗಳನ್ನು ಸ್ಥಿರಗೊಳಿಸಿ ಶಾಂತಿಯುತ ಕಾಶ್ಮೀರವೆಂಬುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿರುತ್ತದೆ.
ಆದರೂ ಸಹ ಅಲ್ಲಿನ ಭಯೋತ್ಪಾದಕರ ನುಸುಳುಕೋರರ ಹಾವಳಿ ತಡೆಗಟ್ಟಲು ಸಾಧ್ಯವಾಗಿಲ್ಲ. ಇತ್ತೀಚೆಗೆ ವಲಸೆ ಕಾರ್ಮಿಕರ ಮೇಲಿನ ದಾಳಿಗಳು ಮಾರುಕಟ್ಟೆಗಳಲ್ಲಿ ದಾಳಿಗಳು ಹಾಗೂ ಇಂದು ನಡೆದಿರುವ ಪ್ರವಾಸಿಗರ ಮೇಲಿನ ದಾಳಿ ಗಮನಿಸುವುದಾದರೆ ಕಾಶ್ಮೀರದ ಶಾಂತಿ ಮತ್ತು ಭಾರತದೊಂದಿಗಿನ ಏಕತೆಗೆ ಉಗ್ರರು ಅರ್ಥಾತ್ ಪ್ರತ್ಯೇಕವಾದಿಗಳು ತೀವ್ರ ಸವಾಲುವೊಡ್ಡುತ್ತಿರುವುದು ಕಳವಳಕಾರಿಯದ ಸಂಗತಿಯಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಉಗ್ರದ ವಿರುದ್ಧ ವ್ಯಾಪಕ ಕಠಿಣ ಕ್ರಮಗಳನ್ನು ಕೈಗೊಂಡು ತಕ್ಕ ಉತ್ತರವನ್ನು ನೀಡಬೇಕೆಂದು ಆಗ್ರಹಿಸಿದ್ದರು
ಈ ದುಃಖಕರ ಸಂದರ್ಭದಲ್ಲಿ ಭಾರತೀಯ ನಾಗರಿಕರೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು ಹಾಗೂ ಇಸ್ಲಾಮಿಕ್ ಭಯೋತ್ಪಾದನೆಯ ವಿರುದ್ಧ ಧ್ವನಿ ಎತ್ತಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉಗ್ರಗಾಮಿಗಳ ದಾಳಿಗೆ ಒಳಗಾಗಿರುವ ಕುಟುಂಬಗಳಿಗೆ ಸಾಂತ್ವನ ನೀಡಿ ಧೈರ್ಯ ತುಂಬಬೇಕು. ಭಾರತೀಯ ನೆಲದಲ್ಲಿ, ಭಾರತೀಯ ನಾಗರೀಕರ ಮೇಲಿನ ಇಂತಹ ದಾಳಿಗಳು ಸಹಿಸಲು ಅಸಾಧ್ಯ ಹಾಗೂ ಭಯೋತ್ಪಾದಕರ ವಿರುದ್ಧ ಶೂನ್ಯ ಸಹಿಷ್ಣುತೆಯೊಂದಿಗೆ ಭಯೋತ್ಪಾದನೆಯನ್ನು ಮೂಲದಿಂದ ಕಿತ್ತೊಗೆಯಲು ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸಿದರು.
ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷ ವಿಷ್ಣು ಸಿ ಕೋಟೆ, ಈಶ್ವರ ರುಮ್ಮಾ ಪವನ ಕುಂಬಾರ. ರೇವಣಸಿದ್ಧಯ್ಯ ಸ್ವಾಮಿ. ಪಾಂಡುರಂಗ. ಶಿವಶರಣ ಕೋಟೆ. ಭಾಗ್ಯಶ್ರೀ . ವೈಷ್ಣವಿ. ಶಿವಲೀಲಾ. ರಮ್ಯಾ. ಸಾಕ್ಷಿ. ಪ್ರಜ್ವಲ. ರಾಹುಲ. ಅನಿಲ. ಬಸವರಾಜ್.ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು
ವರದಿ: ಸಂತೋಷ ಬಿಜಿ ಪಾಟೀಲ್