ಕಲಘಟಗಿ :- ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಆಟೋ ಹಾಗೂ ಕೆ.ಎಸ್.ಆರ್ ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಆಟೋ ಚಾಲಕ ಗಂಭೀರ ಗಾಯಗೊಂಡಿದ್ದು ಆಟೋ ದಲ್ಲಿ ಇದ್ದ ಚಾಲಕನ ಮಗಳು ಹಾಗೂ ಮಗನಿಗೂ ಗಾಯಗಳಾಗಿವೆ.

ಆಟೋ ಚಾಲಕ ಕಲಘಟಗಿ ನಿವಾಸಿಯಾಗಿದ್ದು ಗಣೇಶ ಭಾಪಶೇಟ್ ಎಂದು ಗುರುತಿಸಲಾಗಿದೆ ಸದ್ಯಹುಬ್ಬಳ್ಳಿಯಲ್ಲಿ ವಾಸವಾಗಿದ್ದ ಇವರು . ಮಕ್ಕಳನ್ನು ಕರೆದುಕೊಂಡು ಕಲಘಟಗಿ ಬಂದು ಹೋಗುತ್ತಿರುವಾಗ ಈ ಘಟನೆ ಸಂಭವಿಸಿದೆ.ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಪೋಲಿಸ್ ಸಿಬ್ಬಂದಿಗಳು ಆಗಮಿಸಿದ್ದು ತನಿಖೆ ಕೈಗೊಂಡಿದ್ದಾರೆೆ.ಪ್ರಕರಣ ಕಲಘಟಗಿ ಪೊಲೀಸ ಠಾಣೆಯಲ್ಲಿ ದಾಖಲಾಗಿದ್ದು ಸಿ.ಪಿ.ಐ ಶ್ರೀಶೈಲ ಕೌಜಲಗಿ ಮುಂದಿನ ತನಿಕೆ ಕೈಗೊಂಡಿದ್ದಾರೆ.
ವರದಿ:-ನಿತೀಶ




