Ad imageAd image

ಅಪ್ರಾಪ್ತೆ ಮೇಲೆ ಅತ್ಯಾಚಾರ ಕೇಸ್ : ಆರೋಪಿಗೆ 30 ವರ್ಷ ಕಠಿಣ ಶಿಕ್ಷೆ, 2 ಲಕ್ಷ ರೂ. ದಂಡ

Bharath Vaibhav
ಅಪ್ರಾಪ್ತೆ ಮೇಲೆ ಅತ್ಯಾಚಾರ ಕೇಸ್ : ಆರೋಪಿಗೆ 30 ವರ್ಷ ಕಠಿಣ ಶಿಕ್ಷೆ, 2 ಲಕ್ಷ ರೂ. ದಂಡ
LAW
WhatsApp Group Join Now
Telegram Group Join Now

ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದರಿಂದ ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಪ್ರಕರಣದ ಆರೋಪಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 2 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಪೊಕ್ಸೋ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.

ತಾಲೂಕಿನ ಕಂಗ್ರಾಳಿ ಕೆಎಚ್‌ ಗ್ರಾಮದ ನಾಗೇಶ ಕರೆಪ್ಪಾ ಲಮಾಣಿ(20) ಎಂಬ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆಯ ಮನೆಗೆ ನುಗ್ಗಿ ಬಲವಂತವಾಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ, ಯಾರಿಗಾದರೂ ಹೇಳಿದತೆ ಮನೆಯವರನ್ನು ಕೊಲ್ಲುವ ಬೆದರಿಕೆ ಹಾಕಿದ್ದನು.

ನಂತರ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಜೂನ್ 2020 ರಲ್ಲಿ ಎಪಿಎಂಸಿ ಠಾಣೆಯಲ್ಲಿ ಸಂತ್ರಸ್ತ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು.

ಪಿಎಸ್‌ಐ ಮಂಜುನಾಥ ಭಜಂತ್ರಿ ದೂರು ದಾಖಲಿಸಿಕೊಂಡಿದ್ದರು. ಮುಂದಿನ ಕ್ರಮಕ್ಕಾಗಿ ತನಿಖಾಧಿಕಾರಿ ದಿಲೀಪಕುಮಾರ ಕೆ ಎಚ್ ಅವರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

7 ಸಾಕ್ಷಿ, 37 ದಾಖಲೆಗಳ ಆಧಾರದ ಮೇಲೆ ಆರೋಪಿ ನಾಗೇಶ ಲಮಾಣಿಗೆ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ಶಿಕ್ಷೆ ವಿಧಿಸಿದ್ದಾರೆ.

ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ರೂಪ. 7 ಲಕ್ಷ ರೂ. ಪರಿಹಾರ ಧನ ಪಡೆಯಲು ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ. ಪಾಟೀಲ ವಾದ ಮಂಡಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!